ವಿಜಯಪುರ: ಕೋವಿಡ್ ನಿಯಂತ್ರಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ಸರ್ಕಾರ ಆದೇಶ ಹೊರಡಿಸಿದೆ.
![Vijayapura](https://etvbharatimages.akamaized.net/etvbharat/prod-images/11599128_961_11599128_1619838643645.png)
ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಯು.ಶಿವಶಂಕರ, ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವಿಜಯಪುರ ಡಿಹೆಚ್ಒ ಡಾ. ರಾಜಕುಮಾರ ಯರಗಲ ಕಡ್ಡಾಯ ರಜೆ ಮೇಲೆ ತೆರಳುವಂತೆ ಸೂಚಿಸಿದ್ದಾರೆ.
ಡಾ. ರಾಜಕುಮಾರ ಯರಗಲ ಕೋವಿಡ್ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರು. ಈ ಸಂಬಂಧ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ 4 ಬಾರಿ ಶೋಕಾಸ್ ನೋಟಿಸ್ ನೀಡಿ ಎಚ್ಚರಿಸಿದ್ದರು. ಆದರೂ ಎಚ್ಚೆತ್ತುಕೊಳ್ಳದ ಆರೋಗ್ಯಾಧಿಕಾರಿಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ಆದೇಶ ನೀಡಿ ಶಾಕ್ ನೀಡಿದ್ದಾರೆ.
ಈ ಹಿಂದೆ ಬಾಗಲಕೋಟೆ ಡಿಹೆಚ್ಒ ಆಗಿದ್ದ ರಾಜಕುಮಾರ ಯರಗಲ ಅಲ್ಲಿಯೂ ಸಹ ಸಾಕಷ್ಟು ಎಡವಟ್ಟು ಮಾಡಿಕೊಂಡು ಇಲಾಖೆಯ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು ಎನ್ನಲಾಗಿದೆ.
ಓದಿ: ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಜಾಗೃತರಾಗಿರಿ.. ಈ ಲಕ್ಷಣಗಳು ಕಂಡುಬಂದ್ರೆ ತಕ್ಷಣ ಎಚ್ಚೆತ್ತುಕೊಳ್ಳಿ