ವಿಜಯಪುರ: ಕೇಂದ್ರ ಸರ್ಕಾರದ ಜಾರಿಗೆ ತಂದಿರುವ ಸಿಎಎ ಹಾಗೂ ಪೌರತ್ವ ನೋಂದಣಿ ವಿರೋಧಿಸಿ ಮುಸ್ಲಿಂ ಮಹಿಳೆಯರಿಂದ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಮಹಿಳೆಯರು ಭಾಗಿಯಾಗಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎನ್ಎಸ್ಯುಐ ಸಂಘಟನೆಯ ಮುಖಂಡೆ ಅಮೂಲ್ಯ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರದ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.