ವಿಜಯಪುರ: ಜಿಲ್ಲೆಯಲ್ಲಿ ಮಟ್ಕಾ ದಂಧೆ ಹಾವಳಿ ಹೆಚ್ಚಾಗಿದೆ. ರಾಜಾರೋಷವಾಗಿ ಮನೆಯಲ್ಲಿ ಮಟ್ಕಾ ನಂಬರ್ ಬರೆದುಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಜಿಲ್ಲೆಯ ದೇವರ ಹಿಪ್ಪರಗಿಯಲ್ಲಿ ಮಟ್ಕಾ ದಂಧೆ ಪ್ರಕರಣ ಬೆಳಕಿಗೆ ಬಂದಿದೆ. ದಂಧೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಡಿಸಿ, ಎಸ್ಪಿಗೆ ಸ್ಥಳೀಯರು ಪತ್ರ ಬರೆದು ಆಗ್ರಹಿಸಿದ್ದಾರೆ. ದೇವರ ಹಿಪ್ಪರಗಿ ಪಟ್ಟಣದಲ್ಲಿಯೇ 15 ರಿಂದ 20 ಜನರು ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಮಧ್ಯಾಹ್ನದಿಂದ ರಾತ್ರಿವರೆಗೂ ಮಟ್ಕಾ ಬರೆದುಕೊಳ್ಳುತ್ತಿದ್ದಾರೆ. ಅಶೋಕ್ ಡಾಲೇರ ಇವರ ಕಿಂಗ್ ಪಿನ್ ಎಂದು ತಿಳಿದು ಬಂದಿದೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಠಾಣೆಗೆ ಹೋಗಿ ಹೇಳಲು ಜನರು ಹೆದರುತ್ತಿದ್ದಾರೆ ಎನ್ನಲಾಗ್ತಿದೆ. ಹಾಗಾಗಿ ಡಿಸಿ ದಾನಮ್ಮನವರ ಹಾಗೂ ಎಸ್ಪಿ ಆನಂದ ಕುಮಾರ ಅವರಿಗೆ ಸ್ಥಳೀಯರು ಪತ್ರ ಬರೆದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಪಾವಗಡ ಪಟ್ಟಣದಲ್ಲಿ ಹಾಡಹಗಲೇ ಮಟ್ಕಾ ದಂಧೆ!