ವಿಜಯಪುರ: ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಅಲ್ಪಸಖ್ಯಾಂತರ ಘಟಕದಿಂದ, ಭಾರತ ರತ್ನ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ 131ನೇ ಜನ್ಮದಿನವನ್ನ ಆಚರಿಸಲಾಯಿತು. ಟಿಪ್ಪು ಸುಲ್ತಾನ್ ವೃತ್ತದ ವೇದಿಕೆಯಲ್ಲಿ ಆಜಾದ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮೂಲಕ, ದೇಶದ ಮೊದಲ ಶಿಕ್ಷಣಮಂತ್ರಿಯನ್ನು ಸ್ಮರಿಸಲಾಯಿತು.
ಇನ್ನು ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪ್ರೊ. ರಾಜು ಆಲಗೂರು, ಜಮೀರ್ ಅಹಮ್ಮದ್ ಸೇರಿದಂತೆ ಅನೇಕ ಜನ ಪ್ರತಿನಿಧಿಗಳು ಭಾಗಿಯಾಗಿದ್ದರು.