ವಿಜಯಪುರ: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆಶಿ ಪ್ರತಿಜ್ಞಾ ವಿಧಿ ಸ್ವೀಕರಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಅವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಸಂಭ್ರಮಿಸಿದರು.
ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಡಿಕೆಶಿ ಪ್ರತಿಜ್ಞಾ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಪರವಾಗಿ ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಿದರು.
ಇನ್ನು ಡಿಕೆ.ಶಿವಕುಮಾರ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದರು.