ಮುದ್ದೇಬಿಹಾಳ (ವಿಯಯಪುರ): ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ದೆಹಲಿಗೆ ಕರೆಯಿಸಿಕೊಂಡಿರುವ ಕುರಿತು ನನಗೆ ಗೊತ್ತಿಲ್ಲ. ಸಚಿವ ನಿರಾಣಿ ಹಾಗೂ ಸಿ.ಸಿ.ಪಾಟೀಲ್ ಅವರು ಏನು ಮಾತನಾಡಿದ್ದಾರೆ ಎಂಬುವುದೂ ನನಗೆ ಗೊತ್ತಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ತಾಲೂಕಿನ ಬಸರಕೋಡದ ಪ್ರಗತಿಪರ ರೈತರಾದ ಪವಾಡೆಪ್ಪ ವಡ್ಡರ, ಹೇಮರಡ್ಡಿ ಮೇಟಿ ಹಾಗೂ ಶ್ರೀಶೈಲ ಮೇಟಿ ಅವರ ಹೊಲಕ್ಕೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಬಸನಗೌಡ ಪಾಟೀಲ ಯತ್ನಾಳ್ ಅವರು ಕಾಂಗ್ರೆಸ್ನ ಬಿ ಟೀಂ ಎಂದು ಟೀಕಿಸಿರುವ ಕುರಿತು ಯಾವುದೇ ಮಾತು ಹೇಳದೇ ಅಂತರ ಕಾಯ್ದುಕೊಂಡರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಿಲೆಟಿನ್ ಸ್ಫೋಟಗೊಂಡು ಮತ್ತೆ ಹಲವು ಕಾರ್ಮಿಕರು ಸಾವನ್ನಪ್ಪಿರುವ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.