ETV Bharat / state

ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ನಡೆದಿಲ್ಲ.. ಸಚಿವ ಮುರುಗೇಶ್​ ನಿರಾಣಿ - ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಕುರಿತು ಸಚಿವ ಮುರುಗೇಶ ನಿರಾಣಿ ಪ್ರತಿಕ್ರಿಯೆ

ಮಹಾರಾಷ್ಟ್ರದಲ್ಲಿ ಒಬ್ಬರ ಬಳಿ ಸ್ಟೇರಿಂಗ್, ಒಬ್ಬರ ಬಳಿ ಬ್ರೇಕ್, ಒಬ್ಬರ ಬಳಿ ಎಕ್ಸಲೇಟರ್ ಎಂಬಂತಾಗಿದೆ. ಮೂರು ಪಕ್ಷಗಳು ಚುನಾವಣೆಗೆ ಹೋಗಿದ್ದ ವೇಳೆ ಅವರ ಸಿದ್ಧಾಂತಗಳು, ಪ್ರಣಾಳಿಕೆಗಳು ಬೇರೆ ಬೇರೆ ಆಗಿದ್ದವು. ಹಾಗಾಗಿ, ಅವರೆಲ್ಲ ಸೇರಿ ಸರ್ಕಾರ ನಡೆಸಿದ್ದೇ ತಪ್ಪಾಗಿದೆ ಎಂದು ಸಚಿವ ಮುರುಗೇಶ ನಿರಾಣಿ ಅವರು ಹೇಳಿದ್ದಾರೆ.

ಸಚಿವ ಮುರುಗೇಶ ನಿರಾಣಿ
ಸಚಿವ ಮುರುಗೇಶ ನಿರಾಣಿ
author img

By

Published : Jun 27, 2022, 4:47 PM IST

ವಿಜಯಪುರ: ಮಹಾರಾಷ್ಟ್ರದಲ್ಲಿನ ರಾಜಕೀಯ ಬೆಳವಣಿಗೆ ಹಾಗೂ ಆಪರೇಷನ್ ಕಮಲ‌ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಚಿವ ಮುರುಗೇಶ ನಿರಾಣಿ, ಮೊದಲು ಅವರು ಸರ್ಕಾರ ಮಾಡಿದ್ದೇ ತಪ್ಪಾಗಿದೆ ಎಂದಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಎನ್ ಸಿ ಪಿ ಹಾಗೂ ಶಿವಸೇನೆ ಸೇರಿ ಸರ್ಕಾರ ಮಾಡಿದಾಗಲೇ ಗೊತ್ತಾಗಿತ್ತು, ಇದು ಕೋಮಾದಲ್ಲಿರುವ ಸರ್ಕಾರ, ಬಹಳ‌ ದಿನ ನಡೆಯೋದಿಲ್ಲ‌ ಎಂದು. ಆ ಸರ್ಕಾರ ಇಲ್ಲಿಯವರೆಗೂ ನಡೆದಿದ್ದೇ ದೊಡ್ಡ ವಿಷಯ ಎಂದರು.

ಸಚಿವ ಮುರುಗೇಶ ನಿರಾಣಿ ಅವರು ಮಾತನಾಡಿದರು

ಮಹಾರಾಷ್ಟ್ರದಲ್ಲಿ ಒಬ್ಬರ ಬಳಿ ಸ್ಟೇರಿಂಗ್, ಒಬ್ಬರ ಬಳಿ ಬ್ರೇಕ್, ಒಬ್ಬರ ಬಳಿ ಎಕ್ಸಲೇಟರ್ ಎಂಬಂತಾಗಿದೆ. ಮೂರು ಪಕ್ಷಗಳು ಚುನಾವಣೆಗೆ ಹೋಗಿದ್ದ ವೇಳೆ ಅವರ ಸಿದ್ಧಾಂತಗಳು, ಪ್ರಣಾಳಿಕೆಗಳು ಬೇರೆ ಬೇರೆ ಆಗಿದ್ದವು. ಹಾಗಾಗಿ, ಅವರೆಲ್ಲ ಸೇರಿ ಸರ್ಕಾರ ನಡೆಸಿದ್ದೇ ತಪ್ಪಾಗಿದೆ ಎಂದು ತಿಳಿಸಿದರು.

ರಾಷ್ಟ್ರ ನಾಯಕರು ತೀರ್ಮಾನಿಸುತ್ತಾರೆ: ತಮ್ಮ ತಮ್ಮಲ್ಲಿನ ಒಡಕಿನಿಂದ ಅವರು ಹೊರಗಡೆ ಹೋಗ್ತಿದ್ದಾರೆ. ಇದರಲ್ಲಿ ಬಿಜೆಪಿ ಕೈವಾಡ ಇಲ್ಲ. ಬಿಜೆಪಿಯಿಂದ ಆಪರೇಷನ್ ಕಮಲ ಮಾಡಿಲ್ಲ. ಐವತ್ತರಷ್ಟು ಜನ್ರಿಗೆ ಆಪರೇಷನ್ ಕಮಲ ಮಾಡೋಕೆ ಸಾಧ್ಯವಿಲ್ಲ. ಹೇಗೆ ಸಾಧ್ಯ?. ತಮ್ಮಲ್ಲೇ ಒಪ್ಪಿಗೆ ಇಲ್ಲದಕ್ಕೆ ಅವರು ಹೊರಗಡೆ ಬಂದಿದ್ದಾರೆ. ಮುಂದೆ ಏನು ಮಾಡಬೇಕು ಎಂಬುದು ರಾಜ್ಯ ಹಾಗೂ ರಾಷ್ಟ್ರ ನಾಯಕರು ತೀರ್ಮಾನಿಸುತ್ತಾರೆ ಎಂದು ಹೇಳಿದರು.

ಬಿಜೆಪಿಯಿಂದ ಪ್ರತಿಯೊಬ್ಬರಿಗೆ ಐವತ್ತು ಕೋಟಿ ನೀಡಲಾಗಿದೆ ಎಂದು ಆರೋಪಿಸಿದ ವಿಚಾರವಾಗಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಚಿವ ನಿರಾಣಿ, ಪ್ರತಿಪಕ್ಷದವರು ಮಾಡುವ ಆರೋಪ ಸತ್ಯಕ್ಕೆ ದೂರವಾಗಿದೆ. ಅವರಾಗೇ ಮುಂದೆ ಬಂದ್ರೆ ನಮ್ಮ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಏನು ಮಾಡಬೇಕು ಎಂಬ ತೀರ್ಮಾನ ತೆಗೆದುಕೊಳ್ತಾರೆ. ಎರಡು ದಿನ ಕಾದು ನೋಡಿ, ಯಾವುದೇ ಕಾರಣಕ್ಕೂ ಆಪರೇಷನ್ ಕಮಲ‌ ಮಾಡಲ್ಲ ಎಂದರು.

ಅದು ಅವರ ವೈಯಕ್ತಿಕ ವಿಚಾರ: ಮುಂದಿನ ಸಿಎಂ‌ ನಾನೇ ಎಂದು ಹೆಚ್​ಡಿಕೆ ಹೇಳಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಕನಸು ಕಾಣೋದರಲ್ಲಿ ತಪ್ಪೇನಿಲ್ಲ, ರಾಜಕಾರಣ ಮಾಡುವವರು ಕನಸು ಕಾಣಲಿ, ದೇವರು ಅವರಿಗೆ ಒಳ್ಳೇದು ಮಾಡಲಿ ಎಂದರು.

ಓದಿ: ಮುಂದಿನ ಚುನಾವಣೆಯೊಳಗೆ 'ಬಾಂಬೆ ಫೈಲ್ಸ್​' ಪುಸ್ತಕ ಬಿಡುಗಡೆ: ಹೆಚ್​. ವಿಶ್ವನಾಥ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.