ETV Bharat / state

ವಿಜಯಪುರ: ಗಣಿ ಅಧಿಕಾರಿ ವಿರುದ್ಧ ಸಚಿವೆ ಶಶಿಕಲಾ ಜೊಲ್ಲೆ ಗರಂ - Vijaypur

ವಿಜಯಪುರ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಕ್ರಷರ್ ಎಷ್ಟು ಇವೆ ಎಂದು ಹಲವು ದಿನಗಳಿಂದ ಗಣಿ ಮತ್ತು ಭೂಗರ್ಭ ಅಧಿಕಾರಿ ಮಾಹಿತಿ ನೀಡುತ್ತಿಲ್ಲ, ಅವರ ವರ್ತನೆ ಸಹ ಸರಿಯಿಲ್ಲ ಎಂದು ಮಾಧ್ಯಮದವರು ಅಸಮಾಧಾನ ವ್ಯಕ್ತಪಡಿಸಿದಾಗ, ತಕ್ಷಣ ಅಧಿಕಾರಿಯನ್ನು ಕರೆಯಿಸಿದ ಸಚಿವೆ ಜೊಲ್ಲೆ ಹಾಗೂ ಜಿಲ್ಲಾಧಿಕಾರಿ ಸುನೀಲ ಕುಮಾರ ತೀವ್ರ ತರಾಟೆಗೆ ತೆಗೆದುಕೊಂಡರು.

Minister Shashikala Jolle Anger on mining officer
ಸಚಿವೆ ಶಶಿಕಲಾ ಜೊಲ್ಲೆ ಸುದ್ದಿಗೋಷ್ಠಿ
author img

By

Published : Jan 26, 2021, 4:32 PM IST

ವಿಜಯಪುರ: ಶಿವಮೊಗ್ಗದಲ್ಲಿ ನಡೆದ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಹ ಗಣಿಗಾರಿಕೆ ಕುರಿತು ಸರಿಯಾಗಿ ಗಣಿ ಮತ್ತು ಭೂಗರ್ಭ ಇಲಾಖೆ ಅಧಿಕಾರಿ ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಜಿಲ್ಲಾಧಿಕಾರಿ ತೀವ್ರ ತರಾಟೆಗೆ ತೆಗೆದುಕೊಂಡರು.

ಗಣಿ ಮತ್ತು ಭೂಗರ್ಭ ಇಲಾಖೆ ಅಧಿಕಾರಿ ವಿರುದ್ಧ ಸಚಿವೆ ಶಶಿಕಲಾ ಜೊಲ್ಲೆ ಗರಂ

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸಚಿವರು ಮಾಧ್ಯಮಗೋಷ್ಟಿ ನಡೆಸುತ್ತಿದ್ದರು. ಈ ವೇಳೆ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಕ್ರಷರ್ ಎಷ್ಟು ಇವೆ ಎಂದು ಹಲವು ದಿನಗಳಿಂದ ಗಣಿ ಮತ್ತು ಭೂಗರ್ಭ ಅಧಿಕಾರಿಗೆ ಮಾಹಿತಿ ನೀಡುತ್ತಿಲ್ಲ. ಅವರ ವರ್ತನೆ ಸಹ ಸರಿಯಿಲ್ಲ ಎಂದು ಮಾಧ್ಯಮದವರು ಅಸಮಾಧಾನ ವ್ಯಕ್ತಪಡಿಸಿದಾಗ, ತಕ್ಷಣ ಅಧಿಕಾರಿಯನ್ನು ಕರೆಯಿಸಿದ ಸಚಿವೆ ಜೊಲ್ಲೆ ಹಾಗೂ ಜಿಲ್ಲಾಧಿಕಾರಿ ಸುನೀಲ ಕುಮಾರ ತೀವ್ರ ತರಾಟೆಗೆ ತೆಗೆದುಕೊಂಡರು. ಮೊದಲು ಸೌಜನ್ಯದಿಂದ ಮಾತನಾಡುವುದನ್ನು ಕಲಿಯಿರಿ. ಅವರು ಕೇಳುವ ಮಾಹಿತಿ ನೀಡುವುದು ನಮ್ಮ ಕರ್ತವ್ಯ ಎಂದು ಅಧಿಕಾರಿ ವಿರುದ್ಧ ಗರಂ ಆದರು. ಇನ್ನೊಮ್ಮೆ ಈ ರೀತಿ ದೂರು ಬರದಂತೆ ನೋಡಿಕೊಳ್ಳಿ ಎಂದು ಎಚ್ಚರಿಕೆ ನೀಡಿದರು.

ಕಿರಿಯ ಸಹಾಯಕಿಯರಿಗೆ ಸಂಬಳ: ಕೋವಿಡ್ ನಂತಹ ಗಂಭೀರ ಪರಿಸ್ಥಿತಿಯಲ್ಲಿ ಕೆಲಸ ಮಾಡಿರುವ ಆರೋಗ್ಯ ಇಲಾಖೆಯ ಕಿರಿಯ ಸಹಾಯಕರಿಗೆ ಸರಿಯಾಗಿ ಸಂಬಳ ದೊರೆಯುತ್ತಿಲ್ಲ ಎನ್ನುವ ಮಾಹಿತಿ ತಮ್ಮ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ನಡೆಸಿ ಮತ್ತೆ ಹೀಗಾಗದಂತೆ ನೋಡಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಹೆದರುವ ಅವಶ್ಯಕತೆ ಇಲ್ಲ: ಕೋವಿಡ್ ನಿಯಂತ್ರಣಕ್ಕೆ ಕಂಡು ಹಿಡಿದಿರುವ ವ್ಯಾಕ್ಸಿನ್ ಸುರಕ್ಷಿತವಾಗಿದೆ. ಯಾರು ಅದನ್ನು ತೆಗೆದುಕೊಳ್ಳಲು ಹೆದರುವ ಅವಶ್ಯಕತೆ ಇಲ್ಲವೆಂದು ಸಚಿವೆ ಜೊಲ್ಲೆ ಆರೋಗ್ಯ ಸಿಬ್ಬಂದಿಗೆ ಧೈರ್ಯ ಹೇಳಿದರು. ಜಿಲ್ಲೆಯಲ್ಲಿ ಒಂದೆರಡು ಪ್ರಕರಣ ಬಿಟ್ಟು ಬೇರೆ ಕಡೆಗೆ ಸುರಕ್ಷಿತವಾಗಿ ವ್ಯಾಕ್ಸಿನ್​ ಹಾಕಲಾಗಿದೆ ಎಂದು ತಿಳಿಸಿದರು.

ಸಿಎಂ ದಿನಾಂಕ ನಿಗದಿಗಾಗಿ ಕಾಯುತ್ತಿದ್ದೇವೆ: ಜಿಲ್ಲೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿಮಾನ ನಿಲ್ದಾಣದ ರನ್​​ವೇ ಕಾಮಗಾರಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಕಾಮಗಾರಿ ಆರಂಭಕ್ಕೆ ಸಿಎಂ ಯಡಿಯೂರಪ್ಪ ಅವರನ್ನು ಆಹ್ವಾನಿಸಲಾಗುತ್ತಿದೆ. ಅವರು ದಿನಾಂಕ ನಿಗದಿ ಮಾಡಿದರೆ ಕಾಮಗಾರಿ ಆರಂಭಕ್ಕೆ ಶಂಕು ಸ್ಥಾಪನೆ ನೇರವೇರಿಸಲಾಗುವದು ಎಂದು ಜೊಲ್ಲೆ ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.