ETV Bharat / state

ಫೈನಲ್​ನಲ್ಲಿ ಭಾರತ ಮತ್ತೊಮ್ಮೆ ವಿಶ್ವಕಪ್‌ ಗೆಲ್ಲಲಿ : ಸಚಿವ ಶಿವಾನಂದ ಪಾಟೀಲ್‌ ಶುಭ ಹಾರೈಕೆ

World cup final 2023: ವಿಜಯಪುರದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಕಾರ್ಯಕ್ರಮದ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್‌ ವಿಶ್ವಕಪ್‌ ಫೈನಲ್​ಗೆ ಭಾರತ ತಂಡಕ್ಕೆ ಶುಭ ಹಾರೈಸಿದ್ದಾರೆ.

Minister Sivananda Patil
ಸಚಿವ ಶಿವಾನಂದ ಪಾಟೀಲ್‌
author img

By ETV Bharat Karnataka Team

Published : Nov 18, 2023, 9:42 AM IST

Updated : Nov 18, 2023, 2:28 PM IST

ಸಚಿವ ಶಿವಾನಂದ ಪಾಟೀಲ್‌ ಶುಭ ಹಾರೈಕೆ

ವಿಜಯಪುರ: ನಾಳೆ ವಿಶ್ವಕಪ್​ ಹಣಾಹಣಿ ನಡೆಯಲಿದೆ. ಅಹ್ಮದಾಬಾದ್​ನ ಮೊಟೆರಾ ಸ್ಟೇಡಿಯಂನಲ್ಲಿ ಭಾನುವಾರ ಜರುಗಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ಜಯ ಗಳಿಸುವ ಮೂಲಕ ಮತ್ತೊಮ್ಮೆ ಟೀಂ ಇಂಡಿಯಾ ವಿಶ್ವಕಪ್‌ ಗೆಲ್ಲಲಿ ಎಂದು ಸಚಿವ ಶಿವಾನಂದ ಪಾಟೀಲ್‌ ಶುಭ ಹಾರೈಸಿದ್ದಾರೆ.

ಡಿಸಿಸಿ ಬ್ಯಾಂಕ್‌ ಕೇಂದ್ರ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಸಚಿವ ಶಿವಾನಂದ ಪಾಟೀಲ್‌ ಮಾತನಾಡಿದರು. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಸಹಕಾರ ಮಹಾಮಂಡಳದಿಂದ ಜರುಗಿಸಲ್ಪಡುವ ಈ ವರ್ಷದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಇದೇ ತಿಂಗಳ 20ರಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನೇತೃತ್ವದಡಿ ವಿಜಯಪುರದಲ್ಲಿ ನಡೆಯಲಿದೆ. ಹಾಗೆ ಸಮಾರಂಭದ ಕುರಿತಾಗಿ ಮತ್ತು ಕೈಗೊಳ್ಳಲಾದ ಪೂರ್ವಭಾವಿ ಸಿದ್ಧತೆಗಳ ಕುರಿತಾಗಿ ಬ್ಯಾಂಕಿನ ಅಧ್ಯಕ್ಷರೂ ಆಗಿರುವ ಸಚಿವ ಶಿವಾನಂದ ಪಾಟೀಲ್‌ ಮಾಹಿತಿ ನೀಡಿದರು.

ರಾಜ್ಯ ಮಟ್ಟದ ಸಹಕಾರ ಸಂಘ - ಸಂಸ್ಥೆಗಳು ಹಾಗೂ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಜಿಲ್ಲಾ ಯೂನಿಯನ್‌ ಹಾಗೂ ಸಹಕಾರ ಸಂಘ - ಸಂಸ್ಥೆಗಳ ಸಹಯೋಗದೊಂದಿಗೆ ವಿಜಯಪುರದಲ್ಲಿ ಈ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಜರುಗುತ್ತಿದೆ. ಇದೇ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್​ ನೂತನವಾಗಿ ನಿರ್ಮಿಸಿದ ಶತಮಾನೋತ್ಸವ ಭವನವನ್ನು ಉದ್ಘಾಟಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಮಹತ್ವದ ಸಮಾರೋಪ ಸಮಾರಂಭದಲ್ಲಿ ಸಿಎಂ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಸಹಕಾರ ಸಚಿವರಾದ ಕೆ ಎನ್ ರಾಜಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್‌, ಡಿಸಿಸಿ ಬ್ಯಾಂಕಿನ ಅಧ್ಯಕ್ಷರೂ ಆಗಿರುವ ತಾವು ಸೇರಿದಂತೆ ಅನೇಕ ಸಚಿವರು ಜಿಲ್ಲೆಯ ಸಂಸದರು, ಶಾಸಕರು ಹಿರಿಯ ಸಹಕಾರಿಗಳು ಮತ್ತು ಅಧಿಕಾರಿಗಳು ಸಹ ಪಾಲ್ಗೊಳ್ಳಲಿದ್ದಾರೆ ಎಂದು ಇಂದು ವಿಜಯಪುರದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಈ ಕುರಿತು ಸಚಿವರು ವಿವರಿಸಿದರು.

ಇದರ ಜೊತೆಯಲ್ಲಿಯೇ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಹೊರ್ತಿಯ ಶಾಂತೇಶ್ವರ ವಿವಿಧೋದ್ದೇಶಗಳ ಸಹಕಾರ ಸಂಘದ ಕೆಲ ಉದ್ಘಾಟನಾ ಕಾರ್ಯಕ್ರಮಗಳು ಸಹ ಇದೇ ಸಂದರ್ಭದಲ್ಲಿ ಸಿಎಂ ಅವರಿಂದ ಜರುಗಲಿವೆ ಎಂದು ಸಚಿವ ಶಿವಾನಂದ ಪಾಟೀಲ್‌ ಮತ್ತು ಶಾಂತೇಶ್ವರ ಸಂಸ್ಥೆಯ ಅಧ್ಯಕ್ಷರು ಮಾಹಿತಿ ನೀಡಿದರು. ಮಾಧ್ಯಮಗೋಷ್ಟಿಯಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕರುಗಳು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಹೈ ವೋಲ್ಟೇಜ್‌ ವಿಶ್ವಕಪ್‌ ಕ್ರಿಕೆಟ್‌ ಫೈನಲ್: ಗೆದ್ದು ಬಾ ಇಂಡಿಯಾ ಎಂದು ಶುಭ ಹಾರೈಸಿದ ಮಕ್ಕಳು

Last Updated : Nov 18, 2023, 2:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.