ಮುದ್ದೇಬಿಹಾಳ: ಆ.30 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮರಾದ ತಾಲೂಕಿನ ಬಸರಕೋಡದ ಯೋಧ ಶಿವಾನಂದ ಬಡಿಗೇರ ಅವರ ಮನೆಗೆ ಶನಿವಾರ ಭೇಟಿ ನೀಡಿದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಸೆ.2 ರಂದು ಬಸರಕೋಡದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಯೋಧನ ಅಂತ್ಯಕ್ರಿಯೆ ನಡೆಸಲಾಗಿತ್ತು. ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಯೋಧನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಶಾಸಕರಿಗೆ ಆಗಿರಲಿಲ್ಲ. ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಹುತಾತ್ಮ ಯೋಧನ ನಿವಾಸಕ್ಕೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.