ವಿಜಯಪುರ : ಚುನಾವಣೆಗೆ ಆರು ತಿಂಗಳು ಇರುವಾಗ ಸಚಿವ ಸಂಪುಟ ಪುನಾರಚನೆ ಮಾಡಿದರೆ ನಾವ್ಯಾರು ಮಂತ್ರಿ ಆಗುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಯವರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಆದಷ್ಟು ಬೇಗ ಸಚಿವ ಸಂಪುಟ ಪುನಾರಚನೆ ಮಾಡಲಿದ್ದಾರೆ. ಸದ್ಯದ್ರಲ್ಲೇ ಪಂಚರಾಜ್ಯ ಚುನಾವಣೆ ಇದೆ. ನಾಳೆ ಮುಖ್ಯಮಂತ್ರಿಗಳು ದೆಹಲಿಗೆ ಹೊರಟಿದ್ದಾರೆ. ಅಲ್ಲಿ ಚರ್ಚೆ ನಡೆಸಿ ಸಂಪುಟ ವಿಸ್ತರಣೆ ಮಾಡಬಹುದು. ಯಾವಾಗ ಆಗುತ್ತೋ ಆಗಲಿ, ಚುನಾವಣೆಗೆ 6 ತಿಂಗಳ ಇರುವಾಗ ಕೊಡೊದಾದ್ರೆ ನಾವು ಮಂತ್ರಿ ಆಗಲ್ಲ ಎಂದು ಸ್ಪಷ್ಟಪಡಿಸಿದರು.
ಹೊಸ ಬಾಂಬ್ ಸಿಡಿಸಿದ ಯತ್ನಾಳ್ : ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ಬಿಡುವವರ ಪಟ್ಟಿ ನನ್ನ ಬಳಿ ಇದೆ. ಕಾಂಗ್ರೆಸ್ನಿಂದ ಪಕ್ಷ ಬಿಡೋರ ಸಂಖ್ಯೆ ಈಗ ಹೇಳಲು ಬರಲ್ಲ. ಕಾಲ ಕಾಲಕ್ಕೆ ಹೇಳುತ್ತೀನಿ, ಇನ್ನು ಆರು ತಿಂಗಳು ತಡೆಯಿರಿ, ಹೇಗೆ ಜಾದೂ ನಡೆಯುತ್ತೆ ನೋಡಿ ಎಂದರು.
ಅಧಿಕಾರದ ಆಸೆಗಾಗಿ ಪಾದಯಾತ್ರೆ : ಸಿದ್ದರಾಮಯ್ಯನವರನ್ನು ಮುಗಿಸೋದೆ ಡಿಕೆ ಶಿವಕುಮಾರ್ ಪಾದಯಾತ್ರೆ ಉದ್ದೇಶವಾಗಿದೆ. ಜನರಿಗಾಗಿ ಪಾದಯಾತ್ರೆ ಮಾಡಿಲ್ಲ. ಕಾಂಗ್ರೆಸ್ 50 ವರ್ಷಗಳ ಕಾಲ ದೇಶ ಆಳಿದೆ. ಆಗ ಯಾಕೆ ಮೇಕೆದಾಟು, ಆಲಮಟ್ಟಿ, ಕಾವೇರಿ ಜಗಳ ಬಗೆಹರಿಸಲಿಲ್ಲ. ಅಧಿಕಾರದಲ್ಲಿದ್ದಾಗ ಎಲ್ಲ ಲೂಟಿ ಮಾಡಿ ಈಗ ಅಧಿಕಾರದ ಆಸೆಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. 50 ವರ್ಷದಲ್ಲಿ ಕಾಂಗ್ರೆಸ್ಸಿಗರು ಲೂಟಿ ಮಾಡಿರುವ ಹಣವನ್ನು ಸರ್ಕಾರಕ್ಕೆ ನೀಡಿದ್ರೆ ಎಲ್ಲ ನೀರಾವರಿ ಯೋಜನೆ ಮುಗಿಯುತ್ತವೆ ಎಂದರು.
ಕಾಂಗ್ರೆಸ್ ಯಶಸ್ವಿಯಾಗಲ್ಲ : ಚುನಾವಣೆಗೆ ಒಂದು ವರ್ಷ ಬಾಕಿ ಇದೆ. ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಹೀಗೆ ಮಾಡ್ತಿದೆ. ಜನರನ್ನು ಮರಳು ಮಾಡಲು ಹೀಗೆ ಮಾಡ್ತಿದ್ದಾರೆ. ಜನರು ಹುಚ್ಚರಿಲ್ಲ, ಅವರಿಗೂ ಎಲ್ಲಾ ತಿಳಿಯುತ್ತದೆ. ಕಾಂಗ್ರೆಸ್ ಯಶಸ್ವಿಯಾಗಲ್ಲ ಎಂದರು.
ಇದನ್ನೂ ಓದಿ: ದಿ. ಮಾದೇಗೌಡ ಬಗ್ಗೆ ಅವಹೇಳನ : ಜೆಡಿಎಸ್ನಿಂದ ಶಿವರಾಮೇಗೌಡ ಉಚ್ಚಾಟನೆ
ರೇಣುಕಾಚಾರ್ಯ ದೂರು ವಿಚಾರ : ಸಚಿವರ ವಿರುದ್ಧ ರೇಣುಕಾಚಾರ್ಯರ ದೂರು ವಿಚಾರವಾಗಿ ಪ್ರತಿಕ್ರಿಯೆ ನೀಡಿ, ರೇಣುಕಾಚಾರ್ಯ ಹೈಕಮಾಂಡ್ಗೆ ದೂರು ಕೊಟ್ಟರೆ ಅದು ಅವರ ವೈಯಕ್ತಿಕ. ನನಗೂ ಅದಕ್ಕೂ ಸಂಬಂಧ ಇಲ್ಲ ಎಂದರು.
ಯಾರ ಸಚಿವರ ಬಗ್ಗೆಯೂ ದೂರಿಲ್ಲ : ನಾನು ಯಾವ ಸಚಿವರ ವಿರುದ್ಧವು ದೂರು ಕೊಡಲ್ಲ. ನನ್ನ ಜೊತೆಗೆ ಎಲ್ಲಾ ಸಚಿವರು ಚೆನ್ನಾಗಿದ್ದಾರೆ. ಸಚಿವರು ಸಹಕಾರ ನೀಡಿದ್ದಾರೆ. ಹೋದಾಗ ಗೌರವ ಕೊಟ್ಟಿದ್ದಾರೆ. ನಾ ಹೇಳಿದಾಗ ಆದಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಯಾವ ಸಚಿವರ ಬಗ್ಗೆಯೂ ನನ್ನ ಆರೋಪ, ದೂರು ಇಲ್ಲ ಎಂದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ