ETV Bharat / state

ವಿದ್ಯಾರ್ಥಿ ವಸತಿ ನಿಲಯ ಉದ್ಘಾಟಿಸಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ - ವಿಜಯಪುರದಲ್ಲಿ ನೂತನ ವಿದ್ಯಾರ್ಥಿ ವಸತಿ ನಿಲಯ ಉದ್ಘಾಟನೆ

ವಿದ್ಯಾರ್ಥಿ ವಸತಿ ನಿಲಯದ ನೂತನ ಕಟ್ಟಡ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭ ಹಾಗೂ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಎಸ್​​ಸಿ/ಎಸ್​​ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣಾ ಕಾರ್ಯಕ್ರಮವನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಿದರು.

MLA Basanagowda Patil Yatnal inaugurates new hostel In Vijayapura
ವಿದ್ಯಾರ್ಥಿ ವಸತಿ ನಿಲಯ ಉದ್ಘಾಟಿಸಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ
author img

By

Published : Nov 10, 2020, 10:05 AM IST

ವಿಜಯಪುರ: ಜಿಲ್ಲೆಯ ಡಾ. ಫ.ಗು ಹಳಕಟ್ಟಿ ಸ್ನಾತಕೋತ್ತರ ಕೇಂದ್ರ, ವಚನ ಸಂಗಮ, ತೊರವಿಯಲ್ಲಿ ಗಿರಿಜನ ಉಪಯೋಜನೆ (ಟಿಎಸ್‍ಪಿ) ಅಡಿಯಲ್ಲಿ ನಿರ್ಮಿಸಿದ ವಿದ್ಯಾರ್ಥಿ ವಸತಿ ನಿಲಯದ ನೂತನ ಕಟ್ಟಡ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭ ಹಾಗೂ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣಾ ಕಾರ್ಯಕ್ರಮವನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ನಗರದ ತೊರವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಆವರಣದಲ್ಲಿ ಗಿರಿಜನ ಉಪಯೋಜನೆ (ಟಿಎಸ್‍ಪಿ) ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿದ್ಯಾರ್ಥಿ ವಸತಿ ನಿಲಯ ಕಟ್ಟಡವನ್ನು ಅತ್ಯಂತ ಸುಸಜ್ಜಿತವಾಗಿ ನಿರ್ಮಿಸಲಾಗಿದ್ದು, ವಿಶ್ವವಿದ್ಯಾಲಯದ ಅಭಿವೃದ್ಧಿ ಕಾರ್ಯಗಳಿಗೆ, ಸರ್ಕಾರದಿಂದಲೂ ಅಗತ್ಯ ನೆರವು ನೀಡಲಾಗುವುದು ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಓಪನ್ ಜಿಮ್ ಸೇರಿದಂತೆ ವಾಕಿಂಗ್ ಟ್ರ್ಯಾಕ್ ಇನ್ನಿತರ ಅಗತ್ಯ ಮೂಲಭೂತ ಸೌಕರ್ಯ ಗಳನ್ನು ಒದಗಿಸಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪೂರ ಮಾತನಾಡಿ, ಮೈಸೂರು ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಗಳಂತೆಯೇ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವೂ ಬೆಳಯುವಂತಾಗಬೇಕು. ಆ ನಿಟ್ಟಿನಲ್ಲಿ ಸರ್ಕಾರದಿಂದಲೂ ಅಗತ್ಯ ನೆರವು ನೀಡಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಎಂ. ರಾಮಚಂದ್ರ ಗೌಡ, ನರಸಿಂಹ ರಾಯಚೂರ, ನೀತಾ. ಎಸ್, ಕೆಎಲ್‍ಎನ್ ಮೂರ್ತಿ ಕಟ್ಟಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.