ವಿಜಯಪುರ: ಸಿಎಂ ಬಿ.ಎಸ್. ಯಡಿಯೂರಪ್ಪನವರ ಕಾರ್ಯವೈಖರಿ ವಿರುದ್ಧ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಅಸಮಾಧಾನ ಹೊರ ಹಾಕಿದ್ದಾರೆ.
ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಪತ್ರ ಬರೆದಿರುವ ಅವರು, ವಿಭಾಗವಾರು ಶಾಸಕರ ಬದಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಬೇಕೆಂದು ಆಗ್ರಹಿಸಿದ್ದಾರೆ.
ಓದಿ: ವಲಸೆ ಕಾರ್ಮಿಕರಾಗಿ ಬಂದವರು ಗ್ರಾಮ ಪಂಚಾಯತ್ ಸದಸ್ಯೆಯಾಗಿ ಆಯ್ಕೆ
ಈ ಮೊದಲು ವಿಭಾಗವಾರು ಶಾಸಕರ ಸಭೆ ಕರೆಯಲಾಗಿತ್ತು. ಆ ಸಭೆಗಳು ವಿಫಲವಾಗಿವೆ. ಶಾಸಕರು ಸಿಎಂ ಭೇಟಿಗೆ ಹೋದರೂ ಸಿಗುತ್ತಿಲ್ಲ. ಸಿಎಂ ಅನಾರೋಗ್ಯದ ದೃಷ್ಟಿಯಿಂದ ಸಿಗುತ್ತಿಲ್ಲ ಎಂದು ಭಾವಿಸುತ್ತೇನೆ. ನಾನಾ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ನಾಮನಿರ್ದೇಶನ ಮಾಡುವಲ್ಲಿ ಶಾಸಕರನ್ನು ಕಡೆಗಣಿಸಲಾಗಿದೆ. ಇದರಿಂದ ಕಾರ್ಯಕರ್ತರಿಗೆ ನೋವಾಗಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ರಾಜ್ಯಾಧ್ಯಕ್ಷರು, ಸಿಎಂ ಯಡಿಯೂರಪ್ಪನವರು ಜನವರಿ 4 ಮತ್ತು 5 ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಬೇಕೆಂದು ಒತ್ತಾಯಿಸಿದ್ದಾರೆ.