ವಿಜಯಪುರ: ಎಪಿಎಂಸಿ ವಸತಿ ಗೃಹ ಕಾಮಗಾರಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೂಮಿ ಪೂಜೆ ನೆರವೇರಿಸಿದರು.
ಕೃಷಿ ಮಾರುಕಟ್ಟೆ ಇಲಾಖೆಯ 83 ಲಕ್ಷ ಅನುದಾನದಲ್ಲಿ ನಗರದ ಎಪಿಎಂಸಿ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಿಬ್ಬಂದಿಯ ವಸತಿ ಗೃಹ ಕಟ್ಟಡ ಕಾಮಗಾರಿಗೆ ಯತ್ನಾಳ್ ಭೂಮಿ ಪೂಜೆ ಮಾಡಿ ಚಾಲನೆ ನೀಡಿದರು. ಪೂಜಾ ಕಾರ್ಯಕ್ರಮದಲ್ಲಿ ಎಪಿಎಂಸಿ ಮಾರುಕಟ್ಟೆ ಅಧಿಕಾರಿಗಳು, ಬಿಜೆಪಿ ಮುಖಂಡರು ಸೇರಿದಂತೆ ಹಲವರು ಭಾಗಿಯಾಗಿದ್ರು.