ETV Bharat / state

ಕಾರ್ಮಿಕರ ಸಂಚಾರಕ್ಕೆ ಅನುಮತಿ ನೀಡಿ: ಮುಖ್ಯಮಂತ್ರಿಗೆ ಪತ್ರ ಬರೆದ ಶಾಸಕ ನಡಹಳ್ಳಿ

author img

By

Published : Apr 29, 2020, 7:57 PM IST

ಅಂತಾರಾಜ್ಯ ಕಾರ್ಮಿಕರ ಸಂಚಾರಕ್ಕೆ ಅನುಮತಿ ನೀಡುವಂತೆ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ, ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.

MLA Patil Nadahalli who wrote a letter to the Chief Minister
ಸಂಗ್ರಹ ಚಿತ್ರ

ಮುದ್ದೇಬಿಹಾಳ : ಗೋವಾ, ಮಹಾರಾಷ್ಟ್ರ ಹಾಗೂ ಕೇರಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಸುಮಾರು ಮತಕ್ಷೇತ್ರದ ಕೂಲಿ ಕಾರ್ಮಿಕರನ್ನು ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿದ ಬಳಿಕ ಮರಳಿ ಅವರವರ ಸ್ವಂತ ಗ್ರಾಮಗಳಿಗೆ ತೆರಳಲು ಉಚಿತ ಸಾರಿಗೆ ವ್ಯವಸ್ಥೆ ಒದಗಿಸುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪನವರಿಗೆ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಪತ್ರ ಬರೆದಿದ್ದಾರೆ.

MLA Patil Nadahalli who wrote a letter to the Chief Minister
ಮುಖ್ಯಮಂತ್ರಿಗೆ ಶಾಸಕ ನಡಹಳ್ಳಿ ಬರೆದ ಪತ್ರ

ದೇಶಾದ್ಯಂತ ಲಾಕ್​ಡೌನ್​ ಹೇರಲಾಗಿದ್ದು ಈ ಸಮಯದಲ್ಲಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕರು ದೇಶದ ಇನ್ನಿತರ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ಗೋವಾದಲ್ಲಿ ವಾಸವಾಗಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ಈ ಲಾಕ್​ಡೌನ್​ ಜಾರಿಯಾಗಿದ್ದರಿಂದ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸ್ಥಳೀಯ ಶಾಸಕನಾದ ನನಗೆ ಸಾಕಷ್ಟು ದೂರವಾಣಿ ಕರೆಗಳು ಬರುತ್ತಿವೆ. ಹಾಗಾಗಿ ಕೂಡಲೇ ಅಂತಾರಾಜ್ಯ ಕಾರ್ಮಿಕರ ಸಂಚಾರಕ್ಕೆ ಅನುಮತಿ ನೀಡಬೇಕು ಎಂದು ಪತ್ರದಲ್ಲಿ ನಡಹಳ್ಳಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.