ವಿಜಯಪುರ: ನಗರದ ಜಿಲ್ಲಾಸ್ಪತ್ರೆಯಲ್ಲಿ ನಗರ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ.
ಇದೇ ವೇಳೆ, ಭಾರತದಲ್ಲೇ ಅಭಿವೃದ್ಧಿಪಡಿಸಿದ ಅತ್ಯಂತ ಸುರಕ್ಷಿತ ಹಾಗೂ ಕೊರೊನಾವನ್ನು ಮಣಿಸಲು ಅಗತ್ಯವಿರುವ ಈ ಲಸಿಕೆಯನ್ನು ಎಲ್ಲ ಹಿರಿಯ ನಾಗರಿಕರು ಹಾಗೂ ಅರ್ಹ ವ್ಯಕ್ತಿಗಳು ಪಡೆದುಕೊಳ್ಳಬೇಕು ಎಂದು ಶಾಸಕರು ಮನವಿ ಮಾಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಸ್ಪತ್ರೆ ವೈದ್ಯರಾದ ಶರಣಪ್ಪ ಕಟ್ಟಿ, ರಾಜಕುಮಾರ ಯರಗಲ್, ಎಸ್ ಎಲ್. ಲಕ್ಕಣ್ಣನವರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.