ವಿಜಯಪುರ: ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಿಸಲಾದ ಹೊರ ರೋಗಿಗಳ ನೊಂದಣಿ ಕೊಠಡಿ ಹಾಗೂ ಅಸ್ಥಿ ಚಿಕಿತ್ಸಾ ಕೇಂದ್ರಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಚಾಲನೆ ನೀಡಿದರು.
27 ಲಕ್ಷ ರೂ. ವೆಚ್ಚದಲ್ಲಿ ರೋಗಿಗಳ ನೊಂದಣಿ ಕೊಠಡಿ ಹಾಗೂ 28,60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ನಿರ್ಧರಿಸಲಾಗಿರುವ ಸಾರ್ವಜನಿಕ ಶೌಚಾಲಯ ಹಾಗೂ ಸ್ನಾನದ ಗೃಹಗಳಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚಾಲನೆ ನೀಡಿದರು. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಅಸ್ಥಿ ಚಿಕಿತ್ಸಾ ಕೇಂದ್ರ ನಿರ್ಮಾಣಕ್ಕೂ ಅವರು ಭೂಮಿ ಪೂಜೆ ನೆರವೇರಿಸಿದರು. ಚಿಕಿತ್ಸಾ ಕೇಂದ್ರವು 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಜಿಲ್ಲೆಯ ಜನತೆಗೆ ಅನುಕೂಲವಾಗಲಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ಡಾ. ಶರಣಪ್ಪ ಕಟ್ಟಿ ಬಿಡಿಎ ಸದಸ್ಯರು ಹಾಗೂ ಜಿಲ್ಲಾಸ್ಪತ್ರೆ ಸಿಬ್ಬಂದಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.