ETV Bharat / state

ಖೊಟ್ಟಿ ದಾಖಲೆ ಸೃಷ್ಟಿಸಿ ನೋಂದಣಿ ಮಾಡುವವರ ವಿರುದ್ಧ ಕ್ರಮಕೈಗೊಳ್ಳಿ: ಸಚಿವ ಎಂ ಬಿ ಪಾಟೀಲ್​ - Mnister M B Patil

ಅಕ್ರಮವಾಗಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ನೋಂದಣಿ ಮಾಡುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಚಿವ ಎಂ ಬಿ ಪಾಟೀಲ್​ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Etv Bharatmnister-m-b-patil-meeting-at-dc-office-about-real-estate-fraud-activity-in-vijayapura
ಖೊಟ್ಟಿ ದಾಖಲೆ ಸೃಷ್ಟಿಸಿ ನೋಂದಣಿ ಮಾಡುವವರ ಮೇಲೆ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಿ: ಸಚಿವ ಎಂ ಬಿ ಪಾಟೀಲ್​
author img

By ETV Bharat Karnataka Team

Published : Dec 10, 2023, 7:54 PM IST

Updated : Dec 10, 2023, 8:18 PM IST

ಸಚಿವ ಎಂ ಬಿ ಪಾಟೀಲ್​ ಪ್ರತಿಕ್ರಿಯೆ

ವಿಜಯಪುರ: "ವಿಜಯಪುರ ನಗರ ಸೇರಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ನೋಂದಣಿ ಮಾಡುವ ಪ್ರಕರಣಗಳು ಕಂಡು ಬಂದಿದ್ದು, ಇಂತವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು" ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್​ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಾತನಾಡಿದ ಅವರು, "ಕೆಲವರು ಆಧಾರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಮೂಲಕ ಭೂ ಮಾಲೀಕರ ಹೆಸರಿನಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ನೋಂದಣಿ ಮಾಡಿರುವ 13 ಪ್ರಕರಣಗಳನ್ನು ಈಗಾಗಲೇ ದಾಖಲಿಸಲಾಗಿದೆ. ಖೊಟ್ಟಿ ದಾಖಲೆ ಸೃಷ್ಟಿ ಮಾಡಿ, ಆಸ್ತಿಗಳನ್ನು ನೋಂದಣಿ ಮಾಡುವ ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಾಂಡ್ ರೈಟರ್ಸ್ ಗುರುತಿಸಿ, ಅವರ ಬಾಂಡ್ ರೈಟರ್ಸ್ ಲೈಸೆನ್ಸ್ ರದ್ದುಗೊಳಿಸವಂತೆ" ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

"ಅದರಂತೆ ಉಪ ನೋಂದಣಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹಲವು ದಿನಗಳಿಂದ ಒಂದೇ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವರನ್ನು ಜಿಲ್ಲಾ ವ್ಯಾಪ್ತಿಯಿಂದ ತಾಲೂಕು ಮಟ್ಟಕ್ಕೆ ವರ್ಗಾವಣೆ ಮಾಡಿ, ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಕೆಲಸ ಮಾಡಲು ವರ್ಗಾವಣೆ ಮಾಡಬೇಕು. ಅಕ್ರಮ ಪ್ರಕರಣಗಳು ಕಂಡುಬಂದಲ್ಲಿ ಉಪ ನೋಂದಣಾಧಿಕಾರಿಗಳು ಜಿಲ್ಲಾ ನೋಂದಾಣಾಧಿಕಾರಿಗಳ ಅನುಮತಿ ಪಡೆದು ಸ್ಟೇಟ್ ಎಫ್ಐಆರ್ ಮಾಡಬೇಕು. ನೋಂದಣಿ ಮಾಡುವ ಸಂದರ್ಭದಲ್ಲಿ ಜಿಲ್ಲಾ ನೋಂದಣಾಧಿಕಾರಿಗಳಿಗೆ ಸಬ್ ರಜಿಸ್ಟ್ರಾರ್ ಅವರಿಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ವೋಟರ್ ಐಡಿ ಹಾಗೂ ರೇಶನ್ ಕಾರ್ಡ್ ಕೂಲಂಕೂಷವಾಗಿ ಪರಿಶೀಲಿಸಲು ಲಾಗಿನ್ ಐಡಿ ನೀಡಲಾಗುವುದು. ಮೂಲ ದಾಖಲೆಗಳನ್ನು ಪರಿಶೀಲಿಸಿ ನೋಂದಣಿ ಮಾಡಲು ಕ್ರಮ ಕೈಗೊಳ್ಳಳ್ಳಿ" ಎಂದು ಸೂಚನೆ ನೀಡಿದರು.

"ನೋಂದಣಿ ಮಾಡುವ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ ತಮ್ಮ ಹೆಸರು ಹಾಗೂ ಹುದ್ದೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಜಿಲ್ಲೆಯಾದ್ಯಂತ ಅಕ್ರಮವಾಗಿ ಖೊಟ್ಟಿ ದಾಖಲೆಯನ್ನು ಸೃಷ್ಟಿಸಿ ಮಾರಾಟ ಮಾಡುವುದನ್ನು ತಡೆಗಟ್ಟಲು ತಹಶೀಲ್ದಾರರನ್ನು ನೋಡಲ್ ಅಧಿಕಾರಿಗಳನ್ನಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳಿಂದ ಓರ್ವ ಅಧಿಕಾರಿಯನ್ನು ನೇಮಕ ಮಾಡಿಕೊಳ್ಳಲು ತಿಳಿಸಿದರು. ಇಂತಹ ಪ್ರಕರಣಗಳಲ್ಲಿ ಮೋಸ ಹೋಗಿರುವ ಸಾರ್ವಜನಿಕರು ನೋಡಲ್ ಅಧಿಕಾರಿಗಳಿಗೆ ದೂರು ಸಲ್ಲಿಸಲು ಅನುಕೂಲವಾಗುವಂತೆ ನಿರ್ಣಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ" ತಿಳಿಸಿದರು.

"ಮಹಾನಗರ ಪಾಲಿಕೆ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳುವ ಸಂದರ್ಭದಲ್ಲಿ ಅಲ್ಲಿಯೂ ಸಹ ವೋಟರ್ ಐಡಿ, ರೇಶನ್ ಕಾರ್ಡ್ ಕಡ್ಡಾಯವಾಗಿ ಪರಿಶೀಲನೆ ಮಾಡಬೇಕು. ಇಂದಿನ ಸಭೆಯ ಸಮಗ್ರವಾದ ನಡಾವಳಿಯ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿ ಮಾರ್ಗದರ್ಶನ ಕೋರಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ತಿಕೋಟಾ, ಬಬಲೇಶ್ವರ, ತಾಳಿಕೋಟಿ ತಾಲೂಕುಗಳಲ್ಲಿ ಉಪ ನೋಂದಣಿ ಕಚೇರಿ ಮಂಜೂರಾಗಿದ್ದು, ಈ ಕಚೇರಿಯಲ್ಲಿ ಖಾಲಿ ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಟಿ ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿಗಳಾದ ಬಸಣೆಪ್ಪ ಕಲಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕುಮಾರಸ್ವಾಮಿ ಹೇಳಿಕೆ ಸರಿಯಿಲ್ಲ; ನಮ್ಮ ಸರ್ಕಾರ ಗಟ್ಟಿಯಾಗಿದೆ: ಸಚಿವ ಹೆಚ್ ಕೆ ಪಾಟೀಲ್

Last Updated : Dec 10, 2023, 8:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.