ETV Bharat / state

ರಾಜ್ಯದಲ್ಲಿ ಬಿಜೆಪಿಗೆ ಮತ್ತಷ್ಟು ಶಾಸಕರು ಬರಲಿದ್ದಾರೆ : ಶಾಸಕ ನಡಹಳ್ಳಿ ಬಾಂಬ್ - ಆಹಾರ ಪೂರೈಕೆ ನಿಗಮದ ಅಧ್ಯಕ್ಷ ಎ.ಎಸ್. ಪಾಟೀಲ್​​ ನಡಹಳ್ಳಿ

ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರೇ ಸಿಎಂ ಆಗಿರಲಿದ್ದು, ಮುಂದಿನ ವಿಧಾನಸಭಾ ಚುನಾವಣೆಯೂ ಅವರ ನೇತೃತ್ವದಲ್ಲಿಯೇ ನಡೆಯಲಿದೆ. ಯಾರೋ ಊಹಾಪೋಹಗಳನ್ನು ಎಬ್ಬಿಸುವಂತಹದ್ದು, ಯಡಿಯೂರಪ್ಪನವರು ಇಂದೋ ನಾಳೆ ಚೇಂಜ್ ಆಗಿಬಿಡ್ತಾರೆ ಎನ್ನುವುದು ಊಹಾಪೋಹಗಳೇ ಹೊರತು ಸತ್ಯವಲ್ಲ..

ಶಾಸಕ ಎ.ಎಸ್. ಪಾಟೀಲ್​​ ನಡಹಳ್ಳಿ
ಶಾಸಕ ಎ.ಎಸ್. ಪಾಟೀಲ್​​ ನಡಹಳ್ಳಿ
author img

By

Published : Nov 10, 2020, 4:42 PM IST

Updated : Nov 10, 2020, 5:06 PM IST

ಮುದ್ದೇಬಿಹಾಳ : ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ರಾಜ್ಯದಲ್ಲಿ ಬಿಜೆಪಿಗೆ ಮತ್ತಷ್ಟು ಶಾಸಕರು ಬರಲಿದ್ದಾರೆ ಎನ್ನುವ ಮೂಲಕ ಆಹಾರ ಪೂರೈಕೆ ನಿಗಮದ ಅಧ್ಯಕ್ಷ, ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಎ ಎಸ್‌ ಪಾಟೀಲ್​​ ನಡಹಳ್ಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ತಾಳಿಕೋಟಿ ಪಟ್ಟಣದಲ್ಲಿ ಪುರಸಭೆ ಚುನಾವಣೆಯ ಫಲಿತಾಂಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಧ್ಯಪ್ರದೇಶ, ಬಿಹಾರ್, ಉತ್ತರಪ್ರದೇಶ ಹಾಗೂ ರಾಜ್ಯದ ಎರಡು ಕ್ಷೇತ್ರಗಳಲ್ಲಿ ನಡೆದಿರುವ ಉಪಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಇನ್ನಷ್ಟು ಶಾಸಕರು ಬಿಜೆಪಿಯತ್ತ ಬರಲಿದ್ದಾರೆ ಎಂದು ಹೇಳಿದ್ದಾರೆ.

ಇನ್ನಷ್ಟು ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ವಲಸೆ ಬರ್ತಾರಂತೆ..

ಉಪಚುನಾವಣೆಯಲ್ಲಿ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷದ ನಾಯಕರ ಒಳಜಗಳವೇ, ನಮಗೆ ಲಾಭ ತಂದುಕೊಟ್ಟಿದೆ. ಪಕ್ಷದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್​​ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಒಳಜಗಳವೇ ಕಾಂಗ್ರೆಸ್ ಪಕ್ಷದ ಅವನತಿಗೆ ಕಾರಣವಾಗಲಿದೆ. ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದಿದ್ದಾರೆ. ಈ ಜಗಳ ಇನ್ನಷ್ಟು ವಿಕೋಪಕ್ಕೆ ಹೋಗಿ ಕಾಂಗ್ರೆಸ್ ಮತ್ತಷ್ಟು ರಾಜ್ಯದಲ್ಲಿ ನೆಲಕಚ್ಚಲಿದೆ ಎಂದು ಶಾಸಕ ನಡಹಳ್ಳಿ ಹೇಳಿದ್ದಾರೆ.

ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರೇ ಸಿಎಂ ಆಗಿರಲಿದ್ದು, ಮುಂದಿನ ವಿಧಾನಸಭಾ ಚುನಾವಣೆಯೂ ಅವರ ನೇತೃತ್ವದಲ್ಲಿಯೇ ನಡೆಯಲಿದೆ. ಯಾರೋ ಊಹಾಪೋಹಗಳನ್ನು ಎಬ್ಬಿಸುವಂತಹದ್ದು, ಯಡಿಯೂರಪ್ಪನವರು ಇಂದೋ ನಾಳೆ ಚೇಂಜ್ ಆಗಿಬಿಡ್ತಾರೆ ಎನ್ನುವುದು ಊಹಾಪೋಹಗಳೇ ಹೊರತು ಸತ್ಯವಲ್ಲ.

ಇದಕ್ಕೆ ಯಾರು ಕಿವಿಗೊಡುವ ಅವಶ್ಯಕತೆ ಇಲ್ಲ ಎನ್ನುವ ಮೂಲ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಶಾಸಕ ನಡಹಳ್ಳಿ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಯಡಿಯೂರಪ್ಪ ರಾಜ್ಯದ ಪ್ರಶ್ನಾತೀತ ನಾಯಕರಾಗಿದ್ದಾರೆ. ಅವರ ನೇತೃತ್ವದಲ್ಲಿಯೇ 2023ರ ವಿಧಾನಸಭಾ ಚುನಾವಣೆಯನ್ನು ಗೆಲ್ಲುತ್ತೇವೆ ಎಂದರು.

Last Updated : Nov 10, 2020, 5:06 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.