ವಿಜಯಪುರ: ತಾಯಿಯೊಬ್ಬಳು ತನ್ನ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ಭೀಮಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾಯಕ ಘಟನೆ ಇಂಡಿ ತಾಲೂಕಿನ ಮಿರಗಿ ಗ್ರಾಮದ ಬಳಿ ಇಂದು ಸಂಜೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ತಾಯಿಯನ್ನು ಶೋಭಾ ದುಂಡಪ್ಪ ಹಳ್ಳೂರ (30) ಹಾಗೂ 2 ವರ್ಷ ಮಗುವನ್ನು ದೀಪಾ ಎಂದು ಗುರುತಿಸಲಾಗಿದೆ. ಸಂಜೆ ಭೀಮಾನದಿ ಬಳಿ ಹೋಗಿ ಮಗುವಿನೊಂದಿಗೆ ತಾಯಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸುದ್ದಿ ತಿಳಿಯುತ್ತಿದ್ದಂತೆ ನದಿ ಬಳಿ ನೂರಾರು ಜನ ಸೇರಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಶವ ಹುಡುಕುವ ಕೆಲಸ ಮುಂದುವರೆದಿದೆ.
ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.