ETV Bharat / state

ಕುಡಿವ ನೀರಿನ ಘಟಕದ ಸುತ್ತಮುತ್ತಲಿನ ಪ್ರದೇಶಕ್ಕೆ ಬೆಂಕಿ: ಗ್ರಾಮಸ್ಥರಿಂದ ಪ್ರತಿಭಟನೆ - ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಬಹುಹಳ್ಳಿ ಕುಡಿಯುವ ನೀರಿನ ಘಟಕದ ಸುತ್ತಮುತ್ತಲಿನ ಬೆಟ್ಟದ ಪ್ರದೇಶದಲ್ಲಿ ಬೆಂಕಿ ಹಚ್ಚಲು ಆದೇಶಿಸಿದ ನೀರು ಸರಬರಾಜು ಮೇಲ್ವಿಚಾರಕರನ್ನ ಹಾಗೂ ಬೆಂಕಿ ಹಚ್ಚಿದವರನ್ನ ಸೇವೆಯಿಂದ ವಜಾಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Fire to the surrounding area of ​​the drinking water unit in muddebihal
ಕುಡಿವ ನೀರಿನ ಘಟಕದ ಸುತ್ತಮುತ್ತಲಿನ ಪ್ರದೇಶಕ್ಕೆ ಬೆಂಕಿ..ಗ್ರಾಮಸ್ಥರ ಪ್ರತಿಭಟನೆ
author img

By

Published : May 29, 2020, 11:43 AM IST

ಮುದ್ದೇಬಿಹಾಳ(ವಿಜಯಪುರ): ತಾಲೂಕಿನ ನಾಗರಬೆಟ್ಟ ಗ್ರಾಮದ ಬಹುಹಳ್ಳಿ ಕುಡಿಯುವ ನೀರಿನ ಘಟಕದ ಸುತ್ತಮುತ್ತಲಿನ ಬೆಟ್ಟದ ಪ್ರದೇಶದಲ್ಲಿ ಬೆಂಕಿ ಹಚ್ಚಲು ಆದೇಶಿಸಿದ ನೀರು ಸರಬರಾಜು ಮೇಲ್ವಿಚಾರಕರನ್ನ ಹಾಗೂ ಬೆಂಕಿ ಹಚ್ಚಿದವರನ್ನ ಕೂಡಲೇ ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಬಹುಹಳ್ಳಿ ಕುಡಿಯುವ ನೀರಿನ ಘಟಕದ ಸುತ್ತಮುತ್ತಲಿನ ಬೆಟ್ಟದ ಪ್ರದೇಶಕ್ಕೆ ಬೆಂಕಿ ಹಚ್ಚಿ, ನೈಸರ್ಗಿಕ ಪರಿಸರವನ್ನ ಹಾಳು ಮಾಡಿದ್ದಾರೆ. ಬೆಂಕಿಗೆ ಅಪಾರ ಗಿಡ-ಮರಗಳು ನಾಶವಾಗಿವೆ. ರಾತ್ರಿ ಪೂರ್ತಿ ಅಗ್ನಿಶಾಮಕ ದಳ ಹಾಗೂ ಗ್ರಾಮದವರೆಲ್ಲಾ ಜೊತೆಗೂಡಿ ಬೆಂಕಿ ನಂದಿಸಿದ್ದೇವೆ. ಇಷ್ಟೆಲ್ಲಾ ಆದರೂ ಕೂಡ ನೀರು ಸರಬರಾಜು ಮೇಲ್ವಿಚಾರಕ ಸ್ಥಳಕ್ಕೆ ಬಂದಿಲ್ಲ. ಹೀಗಾಗಿ ಮೇಲ್ವಿಚಾರಕ ಹಾಗೂ ಬೆಂಕಿ ಹಚ್ಚಿದವರನ್ನ ಕೂಡಲೇ ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

ಅಧಿಕಾರಿಗಳ ಭೇಟಿ: ಪ್ರತಿಭಟನೆಯ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಆರ್​ಡ್ಲ್ಯೂಎಸ್​ ಇಲಾಖೆ ಅಧಿಕಾರಿಗಳು ಘಟನೆ ಕುರಿತು ಮಾಹಿತಿ ಪಡೆದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.