ಮುದ್ದೇಬಿಹಾಳ : ಪಟ್ಟಣದ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಒಂದನೇ ಅವಧಿಯ ಆಯ್ಕೆಗೆ ಅ.28 ರಂದು ಮಹೂರ್ತ ನಿಗದಿಯಾಗಿದೆ.
ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಜಿ.ಎಸ್. ಮಳಗಿ ಈ ಕುರಿತು ಅಧಿಕೃತ ದಿನಾಂಕ ಪ್ರಕಟಿಸಿದ್ದು, ಅ.28 ರಂದು ಬೆಳಗ್ಗೆ 9 ಗಂಟೆಯಿಂದ ಚುನಾವಣಾ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.
![Muddebiha's municipal election on May 28](https://etvbharatimages.akamaized.net/etvbharat/prod-images/kn-muddebihal-tmcelectiondate-16-04-kac10030_16102020192137_1610f_1602856297_368.jpg)
ಅಂದೇ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ನಾಮಪತ್ರ ಸ್ವೀಕಾರ, ಪರಿಶೀಲನೆ ಬಳಿಕ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಚುನಾವಣೆ ಸಭೆಯ ತಿಳುವಳಿಕೆ ಪತ್ರದಲ್ಲಿ ತಿಳಿಸಲಾಗಿದೆ. ಅಧ್ಯಕ್ಷ ಹುದ್ದೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾಗಿರಿಸಿದೆ.