ವಿಜಯಪುರ: ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮಡಿವಾಳೇಶ್ವರ ಶಿಕ್ಷಣ ಸಂಸ್ಥೆಯ ಶಾಲೆಯಲ್ಲೇ ಬರ್ಬರವಾಗಿ ಕೊಲೆ ನಡೆದಿದೆ. ದಾಮೂ ನಾಯಕ(55) ಕೊಲೆಯಾದವರು. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಸವನ ಬಾಗೇವಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.