ವಿಜಯಪುರ: ರೌಡಿಶೀಟರ್ ಒಬ್ಬ ಬರ್ಬರವಾಗಿ ಕೊಲೆಯಾಗಿದ್ದಾನೆ. ವಿಜಯಪುರದ ಸೊಲ್ಲಾಪುರ ರಸ್ತೆಯಲ್ಲಿರುವ ರಿಂಗ್ ರೋಡ್ ಕ್ರಾಸ್ನಲ್ಲಿ ನಿನ್ನೆ ತಡರಾತ್ರಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ.
ವಿಜಯಪುರ ನಿವಾಸಿ ಸತೀಶ ನಾಗನೂರ (28) ಕೊಲೆಯಾದ ರೌಡಿಶೀಟರ್. ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ವಿಜಯಪುರ ನಗರದ ಆದರ್ಶನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.