ETV Bharat / state

ಶಾಸಕ ಬಸನಗೌಡ ಪಾಟೀಲ ಯತ್ನಾಳ್​ಗೆ ಕೊಲೆ ಬೆದರಿಕೆ: ಆರೋಪಿ ಅಂದರ್​ - Vijayapura News

ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಘು ಕಣಮೇಶ್ವರ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ರಾಘು ಕಣಮೇಶ್ವರ  ವಿರುದ್ಧ ಪ್ರಕರಣ
ರಾಘು ಕಣಮೇಶ್ವರ ವಿರುದ್ಧ ಪ್ರಕರಣ
author img

By

Published : Sep 8, 2020, 3:46 PM IST

ವಿಜಯಪುರ: ಇಲ್ಲಿನ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಅವರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಬಗ್ಗೆ ಮಾತನಾಡಿದರೆ ಮನೆಗೆ ನುಗ್ಗಿ ಕತ್ತರಿಸುತ್ತೇನೆ ಎಂದು ನಗರ ಶಾಸಕರಿಗೆ ಗೋಳಗುಮ್ಮಟ ಪೊಲೀಸ್ ಠಾಣೆ ಆವರಣದಲ್ಲಿಯೇ ಬಹಿರಂಗವಾಗಿ ರಾಘು ಕಣಮೇಶ್ವರ ಎಂಬುವರು ಬೆದರಿಕೆ ಹಾಕಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆದರಿಕೆ ಹಾಕಿದ ರಾಘು ವಿರುದ್ಧ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಯತ್ನಾಳ್​ಗೆ ಕೊಲೆ ಬೆದರಿಕೆ ಪ್ರಕರಣ: ಆರೋಪಿ ಬಂಧಿಸಿರುವ ಕುರಿತು ಎಸ್​ಪಿ ಮಾಹಿತಿ

ಇದನ್ನು ಆಧರಿಸಿ ರಾಘು ಅವರನ್ನು ಪೊಲೀಸರು ತಾಂಡಾದಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್​ಪಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.