ETV Bharat / state

ಮೂರು ಸರ್ಕಾರಿ ಆಸ್ಪತ್ರೆಗಳಿಗೆ ರಾಷ್ಟ್ರಮಟ್ಟದ ಗುಣಮಟ್ಟ ಭರವಸೆ ಪ್ರಶಸ್ತಿ..! - ಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಂದ್ರ ಕಾಪಸೆ

ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ನೀಡುವ ಆಸ್ಪತ್ರೆಗಳನ್ನು ಉತ್ತೇಜಿಸುವ ಉದ್ದೇಶದಿಂದ ನೀಡಲಾಗುವ ರಾಷ್ಟ್ರೀಯ ಗುಣಮಟ್ಟ ಭರವಸೆ ಪ್ರಶಸ್ತಿ ಪತ್ರವನ್ನು ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ಹೂರ್ತಿ, ತಿಕೋಟಾ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಪಡೆದಿವೆ.

ವಿಜಯಪುರ ಆಸ್ಪತ್ರೆ
ವಿಜಯಪುರ ಆಸ್ಪತ್ರೆ
author img

By

Published : Jun 19, 2021, 9:49 PM IST

ವಿಜಯಪುರ: ಕೋವಿಡ್ ಸಂಕಷ್ಟದ ಸಮಯದಲ್ಲೂ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಜೊತೆಗೆ ಸ್ವಚ್ಛತೆಗೆ ಆದ್ಯತೆ ನೀಡಿದ ಜಿಲ್ಲೆಯ 3 ಸರ್ಕಾರಿ ಆಸ್ಪತ್ರೆಗಳಿಗೆ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರಮಟ್ಟದ ಗುಣಮಟ್ಟ ಭರವಸೆ ಪ್ರಶಸ್ತಿ ಪತ್ರ ಲಭಿಸಿದೆ. ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಂದ್ರ ಕಾಪಸೆ ಮಾಹಿತಿ ನೀಡಿದ್ದಾರೆ.

ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ನೀಡುವ ಆಸ್ಪತ್ರೆಗಳನ್ನು ಉತ್ತೇಜಿಸುವ ಉದ್ದೇಶದಿಂದ ನೀಡಲಾಗುವ ರಾಷ್ಟ್ರೀಯ ಗುಣಮಟ್ಟ ಭರವಸೆ ಪ್ರಶಸ್ತಿ ಪತ್ರವನ್ನು ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ಹೂರ್ತಿ, ತಿಕೋಟಾ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಪಡೆದಿವೆ.

ಪ್ರಶಸ್ತಿ ಪತ್ರ ಪಡೆದ ಆರೋಗ್ಯ ಸಂಸ್ಥೆಗಳ ಆಡಳಿತ ವೈದ್ಯಾಧಿಕಾರಿಗಳಿಗೆ, ಸಿಬ್ಬಂದಿ ವರ್ಗದವರಿಗೆ ಹಾಗೂ ಜಿಲ್ಲಾ ಗುಣಮಟ್ಟ ಭರವಸೆ ಸಲಹೆಗಾರರು ಡಾ. ಸಂತೋಷ ಜೆ.ಕೆ., ಜಿಲ್ಲಾ ಆಸ್ಪತ್ರೆ ಗುಣಮಟ್ಟ ಭರವಸೆ ವ್ಯವಸ್ಥಾಪಕ ಮೆಹಬೂಬ್​ ಪಾಷಾ ಕರಜಗಿ ಮತ್ತು ಆಡಳಿತ ಮತ್ತು ಕಾರ್ಯಕ್ರಮ ಸಹಾಯಕ ಈರಪ್ಪ ಹೊನಗೇಕರಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಂದ್ರ ಕಾಪಸೆ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ವರಿ ಗೋಲಗೇರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.