ETV Bharat / state

ಚಡಚಣ ತಾಪಂ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕಾರ ಸ್ವೀಕಾರ - Vijayapura New President,Vice-President News

ತಾಲೂಕು ಪಂಚಾಯತ್​ ಕಾರ್ಯಾಲಯದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಗೊಂಡ ಗಂಗೂಬಾಯಿ ಬಿರಾದಾರ ಹಾಗೂ ಉಪಾಧ್ಯಕ್ಷೆ ಸುಜ್ನಾನಿ ಬಿರಾದಾರ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು.

ಚಡಚಣ ತಾಲೂಕು ಪಂಚಾಯತ ನೂತನ ಅಧ್ಯಕ್ಷ, ಉಪಾಧ್ಯಕ್ಷ ಅಧಿಕಾರ ಸ್ವೀಕಾರ

author img

By

Published : Aug 21, 2020, 1:12 PM IST

ವಿಜಯಪುರ: ನೂತವಾಗಿ ಆಯ್ಕೆಗೊಂಡ ಚಡಚಣ ತಾಲೂಕು ಪಂಚಾಯತ್​ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಅಧಿಕಾರ ಸ್ವೀಕರಿಸಿದರು‌.

ತಾಲೂಕು ಪಂಚಾಯತ್​ ಕಾರ್ಯಾಲಯದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಗೊಂಡ ಗಂಗೂಬಾಯಿ ಬಿರಾದಾರ ಹಾಗೂ ಉಪಾಧ್ಯಕ್ಷೆ ಸುಜ್ನಾನಿ ಬಿರಾದಾರ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು.

ಚಡಚಣ ತಾಲೂಕು ಪಂಚಾಯತ್​ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಂದ ಅಧಿಕಾರ ಸ್ವೀಕಾರ

ಬಳಿಕ ಮಾತನಾಡಿದ ಮಾಜಿ ಶಾಸಕ ವಿಠ್ಠಲ ಕಟಕದೊಂಡ, ಕೊರೊನಾ ಭೀತಿಯಿಂದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ನೂತವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷೆಯರು ಪಕ್ಷ ಭೇದ ಮರೆತು ಅಭಿವೃದ್ಧಿ ಕಾರ್ಯಗಳಿಗೆ ಶ್ರಮಿಸಬೇಕು‌. ತಾಲೂಕಿಗೆ ಹೆಚ್ಚಿನ ಅನುದಾನ ತರುವ ಮೂಲಕ ಮಾದರಿ ಕಾರ್ಯಗಳಿಗೆ ಹೆಸರುವಾಸಿಯಾಗಬೇಕು ಹಾಗೂ ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದರು.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ಸರಳವಾಗಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಗೊಂಡ ಸದಸ್ಯರು, ತಾಲೂಕು ಪಂಚಾಯತ್​​ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.