ವಿಜಯಪುರ: ಸಚಿವ ಸಂಪುಟ ವಿಸ್ತರಣೆ ಚರ್ಚೆ ಮುಖ್ಯಮಂತ್ರಿಗಳ ಮಟ್ಟದಲ್ಲಿ ನಡೆದೇ ಇಲ್ಲ, ಇದೊಂದು ಸುಳ್ಳು ಸುದ್ದಿ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದರು.
ವಿಜಯಪುರದಲ್ಲಿ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ನಡೆದು ಕೆಲವರನ್ನು ಕೈಬಿಡುವ ಊಹಾಪೋಹಗಳು ಹರಿದಾಡುತ್ತಿದ್ದವು. ಆದರೆ ಯಾವುದೇ ಸಚಿವರನ್ನು ಸಂಪುಟದಿಂದ ಕೈಬಿಡುವುದಿಲ್ಲ ಎಂದರು.
ಇದರ ಜೊತೆಗೆ ಹೊಸದಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಎಲ್ಲರಿಗೂ ಸೂಕ್ತ ಸ್ಥಾನಮಾನ ದೊರೆಯುತ್ತದೆ ಎನ್ನುವ ವಿಶ್ವಾಸವಿದೆ. ಸಿಎಂ ಯಡಿಯೂರಪ್ಪ ಯಾರಿಗೂ ಅನ್ಯಾಯ ಮಾಡುವುದಿಲ್ಲ ಎಂದು ಹೇಳಿದರು.