ವಿಜಯಪುರ: ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ. ವೈರಸ್ ಕುರಿತಾಗಿ ಜಿಲ್ಲಾಡಳಿತ ಮುಂಜಾಗೃತಾ ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ್ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ ಆರೋಗ್ಯ ದೃಷ್ಟಿಯಿಂದ ಸಿಎಂ ಮುಂಜಾಗೃತಾ ಕ್ರಮ ಕೈಗೊಂಡು ರಾಜ್ಯ ಬಂದ್ ಮಾಡಿದ್ದಾರೆ. ಜಿಲ್ಲೆಗೆ ಕೆಲವು ವಿದೇಶದಿಂದ ಆಗಮಿಸಿದ್ದಾರೆ. ಆದರೆ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ವೈರಸ್ ಪತ್ತೆಯಾಗಿಲ್ಲ ಎಂದರು.
ವಿಜಯಪುರ ಪ್ರವಾಸಿ ತಾಣವಾಗಿರುವ ಹಿನ್ನೆಲೆಯಲ್ಲಿ ಇಲ್ಲಿ ಕೊರೊನಾ ವೈರಸ್ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲು ಸಚಿವರೊಂದಿಗೆ ಚರ್ಚೆ ಮಾಡುತ್ತೇನೆ ಎಂದು ಭರವಸೆ ನೀಡಿದರು.