ವಿಜಯಪುರ: ಬಿಜೆಪಿ ಹೈಕಮಾಂಡ್ ಸಿಎಂ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವುದಾದರೆ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಬೇಕೆಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು.
ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಅವರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು, ಅವರು ಮಾಡುವುದಾದರೆ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಬೇಕು ಎನ್ನುವುದು ನಮ್ಮ ಆಗ್ರಹವಾಗಿದೆ ಎಂದರು. ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಜಗಜ್ಯೋತಿ ಬಸವಣ್ಣನವರ ಹೆಸರು ಇಟ್ಟರೆ ಹೆಚ್ಚು ಸೂಕ್ತವಾಗುತ್ತದೆ ಎಂದು ಹೇಳಿದರು.
ದಲಿತ ಅಭಿವೃದ್ಧಿ ನಿಗಮಕ್ಕೆ ಅಂಬೇಡ್ಕರ್ ಹೆಸರನ್ನು ಇಡಲಾಗಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿ ಆಯೋಗಕ್ಕೆ ದೇವರಾಜ್ ಅರಸು ಹೆಸರನ್ನು ಇಡಲಾಗಿದೆ. ಅದೇ ರೀತಿ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಬಸವಣ್ಣನ ಹೆಸರು ಇಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಶ್ರೀಗಳು ತಿಳಿಸಿದರು.