ವಿಜಯಪುರ: ಎನ್ಟಿಪಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 57 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.
ಈ ವ್ಯಕ್ತಿ ಉತ್ತರಪ್ರದೇಶದ ಗಾಜಿಯಾಬಾದ್ನಿಂದ ಜೂನ್ 12ರಂದು ಜಿಲ್ಲೆಗೆ ಆಗಮಿಸಿದ್ದು, ಜೂನ್ 14ರಂದು ಹೋಮ್ ಕ್ವಾರಂಟೈನ್ ಮಾಡಲಾಗಿತ್ತು. ಈ ನಡುವೆ ವ್ಯಕ್ತಿಗೆ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಗಂಟಲು ದ್ರವವನ್ನು ಪರೀಕ್ಷೆಗೊಳಪಡಿಸಲಾಗಿತ್ತು. ವರದಿಯಲ್ಲಿ ಪಾಸಿಟಿವ್ ಬಂದಿದೆ ಎಂದರು.
ಸೋಂಕಿತ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಸೀಲ್ ಡೌನ್‌ಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.