ವಿಜಯಪುರ: ಆಯಾತಪ್ಪಿ ಆಟೋ ಪಲ್ಟಿಯಾಗಿರುವ ಪರಿಣಾಮ ಸ್ಥಳದಲ್ಲಿಯೇ ವ್ಯಕ್ತಿಯೊರ್ವ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಕೊರವಾರ ಬಳಿ ನಡೆದಿದೆ.
ಮೃತನನ್ನು ಸಿದ್ದರಾಮ ಎಂದು ಗುರುತಿಸಲಾಗಿದೆ. ಆಟೋದಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಉಳಿದ ಮೂವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲರೂ ಜಾಲವಾದ ಗ್ರಾಮದವರಾಗಿದ್ದು, ಘಟನೆ ಸಂಬಂಧ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.