ವಿಜಯಪುರ: ಕಾರು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿ ನಡೆದಿದೆ.
ಎಸ್.ಕೆ. ಡಾಬಾ ಬಳಿ ಹೋಗುವಾಗ ಕಾರು ಪಲ್ಟಿಯಾಗಿದ್ದು, ಕಲಬುರಗಿ ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.
ಇನ್ನು ಗಾಯಾಳುವನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.