ವಿಜಯಪುರ: ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಈ ಮೂಲಕ ಮೃತರ ಸಂಖ್ಯೆ 10ಕ್ಕೆ ಏರಿದೆ.
ಕಂಟೈನ್ಮೆಂಟ್ ವಲಯದ ಸಂಪರ್ಕದಿಂದ ಕೋವಿಡ್-19 ಸೋಂಕು ತಗುಲಿರುವ ಬಗ್ಗೆ ದೃಢಪಟ್ಟ ವಿಜಯಪುರ ನಗರದ ಶಾಪೇಟಗಲ್ಲಿ ನಿವಾಸಿ (ರೋಗಿ ಸಂಖ್ಯೆ - 121339) ಆಸ್ಪತ್ರೆಗೆ ಸಾಗಿಸುವ ಮಧ್ಯೆದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಮತ್ತು ಎದೆ ನೋವಿನಿಂದ ಬಳಲುತ್ತಿದ್ದ ಈ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಧ್ಯೆದಲ್ಲಿ ಸಾವನ್ನಪ್ಪಿದ್ದು, ನಂತರ ಬಂದ ಸ್ವ್ಯಾಬ್ ವರದಿಯನ್ವಯ ಈ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
57 ವರ್ಷ ಈ ವ್ಯಕ್ತಿಯು ತೀವ್ರ ಉಸಿರಾಟ ತೊಂದರೆ, ರಕ್ತದೊತ್ತಡ ಕಾಯಿಲೆಗಳಿಂದ ಬಳಲುತ್ತಿದ್ದರು. ತೀವ್ರ ಉಸಿರಾಟ ತೊಂದರೆ ಮತ್ತು ಎದೆ ನೋವಿನಿಂದ ಬಳಲುತ್ತಿರುವಾಗ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಜೂನ್ 27ರಂದು ಸಾವನ್ನಪ್ಪಿದ್ದಾರೆ.
ಇವರ ಗಂಟಲು ದ್ರವ ಮಾದರಿಯನ್ನು ಈ ಹಿಂದೆ ಕಳುಹಿಸಲಾಗಿತ್ತು. ಸಾವಿನ ನಂತರ ಬಂದ ವರದಿ ಪ್ರಕಾರ ಈ ವ್ಯಕ್ತಿಗೆ ಕೋವಿಡ್ -19 ಸೋಂಕಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.