ವಿಜಯಪುರ: ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ 82 ವರ್ಷದ ವೃದ್ಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಜಿಲ್ಲಾಸ್ಪತ್ರೆಯಲ್ಲಿ ವೃದ್ಧನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ವಿಜಯಪುರದ ಕಂಟೇನ್ಮೆಂಟ್ ಏರಿಯಾದ 82 ವರ್ಷದ ವೃದ್ಧನಿಗೆ ರೋಗಿ ನಂಬರ್ 1661 ಮೂಲಕ ಸೋಂಕು ತಗುಲಿತ್ತು. ಶ್ವಾಸಕೋಶ, ಮಧುಮೇಹ, ಹೃದಯಸಂಬಂಧಿ ಕಾಯಿಲೆಗಳಿಂದ ಈತ ಬಳಲುತ್ತಿದ್ದರು. ನಿನ್ನೆ ರಾತ್ರಿ ಹೃದಯಾಘಾತದಿಂದ ವೃದ್ಧ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮಹಾರಾಷ್ಟ್ರದಿಂದ ಬಂದಿದ್ದ ಯುವತಿಗೆ ಸೋಂಕು
ಬೆಳಗ್ಗೆ ಬಂದ ವೈದ್ಯಕೀಯ ವರದಿಯಲ್ಲಿ ಮಹಾರಾಷ್ಟ್ರದಿಂದ ಬಂದಿದ್ದ ಇಬ್ಬರು ಪುರುಷರಿಗೆ ಕೊರೊನಾ ಸೋಂಕು ತಗುಲಿರುವ ಕುರಿತು ವರದಿಯಾಗಿತ್ತು. ಸಂಜೆಯ ವರದಿಯಲ್ಲಿ16 ವರ್ಷದ (ಪಿ 2411) ಯುವತಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಯುವತಿ ಕೂಡಾ ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಬಂದು ಕ್ವಾರಂಟೈನ್ನಲ್ಲಿದ್ದರು. ಯುವತಿಯ ಸ್ವ್ಯಾಬ್ ಟೆಸ್ಟ್ ವರದಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 79ಕ್ಕೆ ಏರಿದೆ.