ವಿಜಯಪುರ: ಆಲಮಟ್ಟಿಗೆ ಸಿಎಂ ಆಗಮಿಸುವ ಹಿನ್ನೆಲೆಯಲ್ಲಿ ಆಲಮಟ್ಟಿ ಸುತ್ತಮುತ್ತ ಬಿಜೆಪಿ ಕಾರ್ಯಕರ್ತರು ಸ್ವಾಗತ ಬ್ಯಾನರ್ ಅಳವಡಿಸಲು ಮುಂದಾದಾಗ ಪೊಲೀಸರು ಅಡ್ಡಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ವೇಳೆ, ಬಿಜೆಪಿ ಕಾರ್ಯಕರ್ತರು - ಪೊಲೀಸರ ಮಧ್ಯೆ ಮಾತಿನ ಚಕಮಕಿ ಸಹ ನಡೆದಿದೆ.
ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಬೆಂಬಲಿಗರಿಗೆ ಪೊಲೀಸರು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿಲಾಗಿದೆ. ಘಟನೆ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ಮುಂಭಾಗದಲ್ಲಿ ನಡೆದಿದೆ.
ಪೊಲೀಸರೊಂದಿಗೆ ಏಕವಚನದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಪ್ರಶಾಂತ್ ಪವಾರ್ಗೆ ಆರಕ್ಷಕರು ಎಚ್ಚರಿಕೆ ನೀಡಿದ್ದಾರೆ.
ನಿನ್ನೆಯೇ ಬ್ಯಾನರ್ ಅಳವಡಿಸಬೇಕಿತ್ತು. ಆದರೆ, ಪೊಲೀಸರು ಅವಕಾಶ ನೀಡುತ್ತಿಲ್ಲ. ಈ ಕುರಿತು ಸಚಿವರ ಗಮನಕ್ಕೆ ತರುತ್ತೇವೆ ಎಂದಾಗ ಮಾತಿನ ಚಕಮಕಿ ನಡೆದಿದೆ.