ವಿಜಯಪುರ: ಲಾಕ್ಡೌನ್ ಆದೇಶ ಇದ್ದರೂ ಅನಗತ್ಯವಾಗಿ ಹೊರಗೆ ಬಂದ 50 ಕ್ಕೂ ಅಧಿಕ ಜನರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ದಿನದಿಂದ ದಿನಕ್ಕೆ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಮನೆಯಿಂದ ಹೊರ ಬಾರದಂತೆ ಎಷ್ಟೇ ಮನವಿ ಮಾಡಿದರೂ ಕೂಡ ಜನರು ಏನಾದರೂ ಒಂದು ನೆಪ ಹೇಳಿಕೊಂಡು ಹೊರಗೆ ಬರುತ್ತಿದ್ದಾರೆ. ಈ ಹಿನ್ನೆಲೆ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
50ಕ್ಕೂ ಅಧಿಕ ಜನರ ಮೇಲೆ ಪೊಲೀಸರು ಈಗಾಗಲೇ ಪ್ರಕರಣ ದಾಖಲು ಮಾಡಿದ್ದಾರೆ. ಬಂಧನಕ್ಕೊಳಗಾದವರನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇರಿಸಿ ವಿಚಾರಣೆ ಮಾಡುತ್ತಿದ್ದಾರೆ.