ETV Bharat / state

ಮುದ್ದೇಬಿಹಾಳ: ಮೀಸಲಾತಿಗಾಗಿ ಮತ್ತೆ ಬೀದಿಗಿಳಿದ ಪಂಚಮಸಾಲಿಗಳು - Panchamasaalis again start protest

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ತಾಲೂಕಿನ ನಾಲತವಾಡ ಹೋಬಳಿಯ ವ್ಯಾಪ್ತಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಎಂ.ಎಸ್. ಪಾಟೀಲ, ಕೂಡಲೇ ಸರ್ಕಾರ 2ಎ ಮೀಸಲಾತಿ ನೀಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಶ್ರೀಗಳು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಿದ್ದಾರೆ ಎಂದರು.

Panchamasaalis again start protest for reservation
ಮೀಸಲಾತಿಗಾಗಿ ಮತ್ತೆ ಬೀದಿಗಿಳಿದ ಪಂಚಮಸಾಲಿಗಳು
author img

By

Published : Mar 2, 2021, 7:11 PM IST

Updated : Mar 2, 2021, 7:21 PM IST

ಮುದ್ದೇಬಿಹಾಳ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಹೋರಾಟ ನಡೆದಿದ್ದು, ಸಮಾಜದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಸರ್ಕಾರ ಸತ್ಯಾಗ್ರಹಕ್ಕೆ ಕೂರಿಸಿದೆ ಎಂದು ಪಂಚಮಸಾಲಿ ಸಮಾಜದ ಮುಖಂಡ ಗುರುಪ್ರಸಾದ ದೇಶಮುಖ ಆರೋಪಿಸಿದ್ದಾರೆ.

ತಾಲೂಕಿನ ನಾಲತವಾಡ ಹೋಬಳಿಯ ವ್ಯಾಪ್ತಿಯ ಪಂಚಮಸಾಲಿ ಸಮಾಜದ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮೀಸಲಾತಿಗಾಗಿ ಮತ್ತೆ ಬೀದಿಗಿಳಿದ ಪಂಚಮಸಾಲಿಗಳು

ರಾಜ್ಯದಲ್ಲಿ ಕೃಷಿ ಕೂಲಿಕಾರರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ. ಈ ಬಗ್ಗೆ ಕಳೆದ 26 ವರ್ಷಗಳಿಂದಲೂ ಸರ್ಕಾರಕ್ಕೆ ಮನವಿ ಮಾಡುತ್ತ ಬಂದಿದ್ದರೂ ಸಹ, ಯಾವುದೇ ರೀತಿ ಸೂಕ್ತವಾಗಿ ಸ್ಪಂದಿಸಿಲ್ಲ. ಆದ್ದರಿಂದ ಕೂಡಲಸಂಗಮದ ಪಂಚಮಸಾಲಿ ಜಗದ್ಗುರು ಮಹಾಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು 2012 ರಿಂದ ನಾಲ್ಕು ಹಂತದ ಹೋರಾಟಗಳನ್ನು ಮಾಡುತ್ತಾ ಬಂದಿದ್ದಾರೆ.

ಜನವರಿ ತಿಂಗಳಲ್ಲಿ ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಿ ಲಕ್ಷಾಂತರ ಜನಸ್ತೋಮದೊಂದಿಗೆ ಶಕ್ತಿ ಪ್ರದರ್ಶನ ಮಾಡಿ, ಸರ್ಕಾರಕ್ಕೆ ಒತ್ತಾಯಿಸಿದ್ದೇವೆ. ಆದರೆ ಸರ್ಕಾರ ಇದುವರೆಗೆ ಯಾವುದೇ ರೀತಿ ಸ್ಪಂದಿಸದ ಕಾರಣ ಫ್ರೀಡಂ ಪಾರ್ಕ್​ನಲ್ಲಿ ಸಮಾಜದ ಗಣ್ಯರು ಹಾಗೂ ಶ್ರೀಗಳು ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ. ಇದಕ್ಕೆ ಸ್ಪಂದಿಸದೇ ಸರ್ಕಾರ ಮೌನವಾಗಿರುವುದು ಖಂಡನೀಯ ಎಂದರು.

ಇದನ್ನೂ ಓದಿ: ನೀವು ಬರೀ ಸಿದ್ದರಾಮಯ್ಯ ಅವರನ್ನು ಮ್ಯಾನೇಜ್ ಮಾಡಿ ಸಾಕು: ಜಗದೀಶ್​ ಶೆಟ್ಟರ್ ವ್ಯಂಗ್ಯ

ಸಮಾಜದ ಮುಖಂಡ ಎಂ.ಎಸ್. ಪಾಟೀಲ ಮಾತನಾಡಿ, ಕೂಡಲೇ ಸರ್ಕಾರ 2ಎ ಮೀಸಲಾತಿ ನೀಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಶ್ರೀಗಳು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಿದ್ದಾರೆ. ಮುಂದಾಗಬಹುದಾದ ಅನಾಹುತಗಳಿಗೆ ಸರ್ಕಾರ ಹೊಣೆ ಹೊರಬೇಕಾಗುತ್ತದೆ ಎಂದು ಹೇಳಿದರು.

Last Updated : Mar 2, 2021, 7:21 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.