ETV Bharat / state

ವಿಜಯಪುರ: ಬಾಲಕನ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿತ

ಜನರನ್ನು ವಿನಾಕಾರಣ ನಿಂದಿಸುತ್ತಿದ್ದ ಎಂದು ಬಾಲಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

author img

By

Published : Mar 23, 2022, 8:17 PM IST

assault
ಥಳಿತ

ವಿಜಯಪುರ: ಗ್ರಾಮಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎನ್ನುವ ಕಾರಣಕ್ಕೆ ಬಾಲಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಈ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ ನಡೆದಿದೆ.

ಬಾಲಕನೊಬ್ಬ ಗ್ರಾಮಸ್ಥರನ್ನು ವಿನಾಕಾರಣ ನಿಂದಿಸುತ್ತಿದ್ದನಂತೆ. ಇದರಿಂದ ರೋಸಿ ಹೋಗಿದ್ದ ಜನರು ಆತನನ್ನು ಬೆತ್ತಲೆಗೊಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ. ಇದೇ ವೇಳೆ ಆತನ ಮುಖಕ್ಕೆ ಕಪ್ಪು ಮಸಿಯನ್ನೂ ಬಳಿದಿದ್ದಾರೆ. ಈ ಘಟನೆಯನ್ನು ಗ್ರಾಮಸ್ಥನೊಬ್ಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ.

ಇದನ್ನು ಕಂಡ ಬಾಲಕನ ತಾಯಿ ಮಗನನ್ನು ಕ್ಷಮಿಸಲು ಪರಿಪರಿಯಾಗಿ ಕೇಳಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡುವುದಾಗಿ ಅವರು ತಿಳಿಸಿದ್ದಾರೆ. ಘಟನೆ ಬಳಿಕ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಈವರೆಗೆ ಯಾರನ್ನೂ ಬಂಧಿಸಿಲ್ಲ.

ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರ, ನಾಲ್ವರು ಬಾಲಾಪರಾಧಿಗಳ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.