ETV Bharat / state

ಆಲಮಟ್ಟಿ ಜಲಾಶಯ: ನದಿಪಾತ್ರದ ಜನರಿಗೆ ಭಯ ಬೇಡ

ಸದ್ಯ ಜಲಾಶಯದಲ್ಲಿ ಕಳೆದ ಸಾಲಿನ ಭರ್ತಿಯನ್ನು ಹೋಲಿಸಿದಲ್ಲಿ ನೀರು ಕಡಿಮೆ ಇದೆ. ಪುನರ್ ವಸತಿ ಕೇಂದ್ರಗಳ ಸ್ಥಾಪನೆ ಹಾಗೂ ಬೋಟ್‌ಗಳ ವ್ಯವಸ್ಥೆಯ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿದೆ ಎಂದು ಡಿಸಿ ತಿಳಿಸಿದರು.

alamatti
alamatti
author img

By

Published : Aug 10, 2020, 8:52 PM IST

ವಿಜಯಪುರ: ಆಲಮಟ್ಟಿ ಜಲಾಶಯದ ಒಳಹರಿವು ಹಾಗೂ ಹೊರ ಹರಿವು ಸಮಾನ ರೀತಿಯಲ್ಲಿದ್ದು ಯಾವುದೇ ರೀತಿಯಿಂದ ನದಿ ವ್ಯಾಪ್ತಿಯ ನಾಗರಿಕರು ಭಯಪಡುವ ಅವಶ್ಯಕತೆ ಇಲ್ಲ. ಪ್ರವಾಹದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಹೇಳಿದ್ದಾರೆ.

ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ

ಸದ್ಯ ಜಲಾಶಯದಲ್ಲಿ ಕಳೆದ ಸಾಲಿನ ಭರ್ತಿಯನ್ನು ಹೋಲಿಸಿದಲ್ಲಿ ನೀರು ಕಡಿಮೆ ಇದೆ. ಜಲಾಶಯಕ್ಕೆ ಸಂಬಂಧಿಸಿದಂತೆ ಹಾಗೂ ಪ್ರವಾಹದ ಮುನ್ನೆಚ್ಚರಿಕೆಯಾಗಿ ಮುದ್ದೇಬಿಹಾಳ, ನಿಡಗುಂದಿ ಹಾಗೂ ಬಬಲೇಶ್ವರ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದ್ದು, ನದಿ ತೀರದ ಗ್ರಾಮಗಳಲ್ಲಿ ಡಂಗೂರ ಬಾರಿಸುವುದು, ಸಾರ್ವಜನಿಕರಿಗೆ ಮಾಹಿತಿಯನ್ನು ನೀಡುವ ಕಾರ್ಯ ಮಾಡಲಾಗುತ್ತಿದೆ. ಪುನರ್ ವಸತಿ ಕೇಂದ್ರಗಳ ಸ್ಥಾಪನೆ ಹಾಗೂ ಬೋಟ್‌ಗಳ ವ್ಯವಸ್ಥೆಯ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ನೀರಿನ ಹರಿವು ಕುರಿತಂತೆ ಮಹಾರಾಷ್ಟ್ರ ರಾಜ್ಯದ ನೀರಾವರಿ ಅಭಿಯಂತರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ನೀರಿನ ನಿರ್ವಹಣೆಯನ್ನು ಮಾಡಲಾಗುತ್ತಿದೆ ಎಂದರು.

'ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶವಿಲ್ಲ'

ಕೋವಿಡ್-19 ಸಾಂಕ್ರಾಮಿಕ ರೋಗ ಹೆಚ್ಚುತ್ತಿದ್ದು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶವಿಲ್ಲ. ಸರ್ಕಾರದ ನಿರ್ದೇಶನದಂತೆ ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಮುನ್ನೆಚ್ಚರಿಕೆಯಿಂದ ಪ್ರತಿಷ್ಠಾಪನೆ ಕೈಗೊಳ್ಳಬೇಕು. ಗಣೇಶ ಮೂರ್ತಿಗಳ ವಿಸರ್ಜನೆಗೆ ಜಿಲ್ಲಾಡಳಿತದಿಂದ ಹಾಗೂ ಮಹಾನಗರ ಪಾಲಿಕೆಯಿಂದ ವ್ಯವಸ್ಥೆ ಮಾಡಲಾಗುತ್ತದೆ. ವಿಸರ್ಜನೆಗೆ ಸಂಬಂಧಿಸಿದಂತೆ ಪಾಲಿಕೆಯಿಂದ ಹೊಂಡ ನಿರ್ಮಾಣದ ವ್ಯವಸ್ಥೆ ಮಾಡಿಕೊಡಲಾಗುತ್ತಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.