ETV Bharat / state

ಬಾವಿಯಲ್ಲಿ ಬಾಲಕಿಯರ ಶವ ಪತ್ತೆ ಪ್ರಕರಣ: ಸಿಒಡಿಗೆ ವಹಿಸಲು ಗ್ರಾಮಸ್ಥರ ಮನವಿ

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಗ್ರಾಮದ ತೋಟದ ಬಾವಿಯಲ್ಲಿ ಇಬ್ಬರು ಬಾಲಕಿಯರ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾದ ಪ್ರಕರಣವನ್ನು ಸಿಓಡಿಗೆ ಒಪ್ಪಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

author img

By

Published : May 25, 2021, 4:38 PM IST

Updated : May 25, 2021, 9:59 PM IST

deadbody
deadbody

ವಿಜಯಪುರ: ಬಸವನಬಾಗೇವಾಡಿ ತಾಲೂಕಿನ ಗ್ರಾಮದ ತೋಟದ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆದರೆ ಬಾಲಕಿಯರ ಕುಟುಂಬದವರು ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಸಹ ತನಿಖೆ ಮುಂದುವರೆಸಿದ್ದಾರೆ. ಮೃತ ಬಾಲಕಿಯರ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

ಬಾವಿಯಲ್ಲಿ ಬಾಲಕಿಯರ ಶವ ಪತ್ತೆ ಪ್ರಕರಣ

ಮೇ 14ರಂದು ಇಬ್ಬರು ಬಾಲಕಿಯರ ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಬಾಲಕಿಯರ ಕುಟುಂಬದವರು ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಪೋಕ್ಸೋ, ಕೊಲೆ ಪ್ರಕರಣದಡಿ ಪ್ರಕರಣ ದಾಖಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್​ಪಿ ಅನುಪಮ್ ಅಗರವಾಲ್ ಸಹ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ 10 ದಿನದೊಳಗೆ ಮೂವರನ್ನು ಬಂಧಿಸಿದ್ದಾರೆ. ಈ ಮಧ್ಯೆ ಬಾಲಕಿಯರ ಗ್ರಾಮಸ್ಥರು ಪ್ರಕರಣವನ್ನು ಸಿಒಡಿಗೆ ಒಪ್ಪಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಬಾಲಕಿಯರ ಅನುಮಾನಾಸ್ಪದ ಸಾವು ಪ್ರಕರಣ ಜಿಲ್ಲೆಯಲ್ಲಿ ಇದೇ ಮೊದಲಲ್ಲ:

ಬಸವನಬಾಗೇವಾಡಿ ತಾಲೂಕಿನಲ್ಲಿಯೇ ಇದು ಎರಡನೇ ಪ್ರಕರಣವಾಗಿದೆ. ತಾಳಿಕೋಟೆ ತಾಲೂಕಿನಲ್ಲಿ ಒಂದು ಹಾಗೂ ವಿಜಯಪುರ ನಗರದಲ್ಲಿ ಒಂದು ಪ್ರಕರಣ ಜಿಲ್ಲೆಯಲ್ಲಿ ಭಾರಿ ಸದ್ದು ಮಾಡಿದ್ದವು. ಜನ ಬೀದಿಗಿಳಿದು ಹೋರಾಟ ನಡೆಸಿದ್ದರು. ಈಗ ಈ ಬಾಲಕಿಯರ ಸಾವಿನ ಪ್ರಕರಣದ ತನಿಖೆ ಯಾವ ರೀತಿ ನಡೆಯುತ್ತದೆ ಎಂಬುದನ್ನು ಸದ್ಯ ಕಾದು ನೋಡಬೇಕಿದೆ.

Last Updated : May 25, 2021, 9:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.