ವಿಜಯಪುರ : ಇಲ್ಲಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನ ಗುಂಪು ಗುಂಪಾಗಿ ಹಣ್ಣುಗಳ ಖರೀದಿಯಲ್ಲಿ ತೊಡಗಿದ್ದಾರೆ.
ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ತರಕಾರಿ ಹಾಗೂ ಹಣ್ಣು ಮಾರಾಟದಲ್ಲಿ ತೊಡಗುವಂತೆ ಜಿಲ್ಲಾಡಳಿತ, ವರ್ತಕರಿಗೆ ಮತ್ತು ಗ್ರಾಹಕರಿಗೆ ಮನವಿ ಮಾಡಿದರೂ ಕೂಡ ಲಾಕ್ಡೌನ್ ಆದೇಶ ಉಲ್ಲಂಘಿಸಿ ವಹಿವಾಟಿನಲ್ಲಿ ತೊಡಗಿದ್ದಾರೆ. ಬೆಳಗಿನ ಜಾವ 5 ಗಂಟೆಯಿಂದ ಪ್ರಾರಂಭಗುವ ಎಪಿಎಂಸಿ ಮಾರುಕಟ್ಟೆಗೆ ಬರುವ ರೈತರು,ಮುಖಗವಸು ಧರಿಸದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪು ಗುಂಪಾಗಿ ಮಾರಾಟ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ.
ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಕೂಡ ಜನರು ಸರ್ಕಾರದ ನಿಯಮ ಪಾಲಿಸುತ್ತಿಲ್ಲ.