ETV Bharat / state

ಸಿದ್ದೇಶ್ವರ ಶ್ರೀಗಳ ಗುರುನಮನ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಗೆ ಆಹ್ವಾನ: ಸಚಿವ ಎಂ ಬಿ ಪಾಟೀಲ್ - etv bharat karnataka

ಸಿದ್ದೇಶ್ವರ ಶ್ರೀಗಳ ಗುರುನಮನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಆಹ್ವಾನ ನೀಡಲಾಗಿದೆ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.

Etv Bharatpm-modi-invited-to-siddeshwar-shri-guru-namana-program-says-mb-patil
ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಗೆ ಆಹ್ವಾನ: ಸಚಿವ ಎಂ ಬಿ ಪಾಟೀಲ್
author img

By ETV Bharat Karnataka Team

Published : Dec 10, 2023, 10:36 PM IST

Updated : Dec 10, 2023, 11:03 PM IST

ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ

ವಿಜಯಪುರ: ಸಿದ್ದೇಶ್ವರ ಸ್ವಾಮೀಜಿ ನಿಧನರಾಗಿ ಜನವರಿ 2ಕ್ಕೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆ ಅಗಲಿದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಆಹ್ವಾನ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ಅವರು ಆಗಮಿಸುತ್ತಾರೋ, ಇಲ್ಲವೋ ಎಂಬುದು ಗೊತ್ತಾಗಲಿದೆ ಎಂದರು.

ಜ.2ರಂದು ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಲಿದ್ದಾರೆ. ಡಿಸೆಂಬರ್ 21 ರಿಂದ ಡಿಸೆಂಬರ್ 31ರ ವರೆಗೆ ವಿಶೇಷ ಗೋಷ್ಠಿಗಳನ್ನು ಆಯೋಜನೆ ಮಾಡಲಾಗುವುದು. ವಿವಿಧ ವಿಚಾರ ಗೋಷ್ಠಿಗಳಲ್ಲಿ ಸಚಿವರುಗಳು ಭಾಗಿಯಾಗಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸ್ಪೀಕರ್​ ಯು ಟಿ ಖಾದರ್ ಸೇರಿದಂತೆ ಹಲವು ಸಚಿವರು ಭಾಗಿಯಾಗುತ್ತಾರೆ. ಪಕ್ಷಾತೀತವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು, ಕೇಂದ್ರ ಸಚಿವರುಗಳಿಗೆ ಆಹ್ವಾನ ನೀಡಲಾಗಿದೆ. ಶ್ರೀಸಿದ್ದೇಶ್ವರ ಶ್ರೀಗಳ ಆಶಯಕ್ಕೆ ಧಕ್ಕೆಯಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆಲಮಟ್ಟಿಯ ಅನ್ನದಾನೇಶ್ವರ ಪುರವರ ಹಿರೇಮಠದ ಪೀಠಾಧಿಪತಿ ಡಾ. ರುದ್ರಮುನಿ ದೇವರು ಮಾತನಾಡಿ, ಶತಮಾನದ ಸಂತ ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮವನ್ನು ಜ.1 ಹಾಗೂ 2ರಂದು ಹಮ್ಮಿಕೊಳ್ಳಲಾಗಿದೆ. ಡಿಸೆಂಬರ್ 21 ರಿಂದ ಡಿಸೆಂಬರ್ 31ರ ವರೆಗೆ ವಿಶೇಷ ಗೋಷ್ಠಿಗಳನ್ನು ಆಯೋಜನೆ ಮಾಡಲಾಗಿದೆ. ಸರ್ಕಾರದ ಸಚಿವರು ಹಾಗೂ ವಿವಿಧ ಪಕ್ಷಗಳ ಮುಖಂಡರು, ನಾಡಿನ ಸಾಧು ಸಂತರು, ಸ್ವಾಮೀಜಿಗಳು ಗುರುನಮನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಕಾರ್ಯಕ್ರಮದ ರೂಪುರೇಷೆಗಳ ಕುರಿತು ನಡೆದ ಸಭೆಯಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಶಾಸಕ ವಿಠಲ ಕಟಕದೊಂಡ, ಮುಖಂಡ ಉಮೇಶ ಕಾರಜೋಳ, ಜ್ಞಾನ ಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ, ಆಲಮಟ್ಟಿಯ ಅನ್ನದಾನೇಶ್ವರ ಪುರವರ ಹಿರೇಮಠದ ಪೀಠಾಧಿಪತಿ ಡಾ. ರುದ್ರಮುನಿ ದೇವರು, ಹರ್ಷಾನಂದ ಸ್ವಾಮೀಜಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: ಖೊಟ್ಟಿ ದಾಖಲೆ ಸೃಷ್ಟಿಸಿ ನೋಂದಣಿ ಮಾಡುವವರ ವಿರುದ್ಧ ಕ್ರಮಕೈಗೊಳ್ಳಿ: ಸಚಿವ ಎಂ ಬಿ ಪಾಟೀಲ್​

Last Updated : Dec 10, 2023, 11:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.