ವಿಜಯಪುರ : ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ನಡೆಯುತ್ತಿದೆ ಎಂದು ಮಾಹಿತಿ ನೀಡಿದ ವ್ಯಕ್ತಿಗೆ ಪೊಲೀಸರೇ ಥಳಿಸಿದ್ದಾರೆ ಎಂಬ ಆರೋಪ ಪ್ರಕರಣ ಇಂಡಿ ತಾಲೂಕಿನ ಮಸಳಿ ಬಿ.ಕೆ ಗ್ರಾಮದಲ್ಲಿ ನಡೆದಿದೆ.
ಲಾಕ್ ಡೌನ್ ಸಮಯದಲ್ಲಿ ಮಸಳಿ ಗ್ರಾಮದಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದೆ ಎಂದು ಗ್ರಾಮದ ಸಂತೋಷ ನದ್ಯಾಳ್ ಎಂಬ ಯುವಕ ಇಂಡಿ ಗ್ರಾಮೀಣ ಪೊಲೀಸರಿಗೆ ಮಾಹಿತಿ ನೀಡಿದ್ದ. ಮಾಹಿತಿ ಆಧರಿಸಿ ಜೂಜುಕೋರರನ್ನು ಬಂಧಿಸಬೇಕಿದ್ದ ಪೊಲೀಸರು ಇತರ ವ್ಯಕ್ತಿಗಳೊಂದಿಗೆ ಸೇರಿಕೊಂಡು ದೂರು ನೀಡಿದ ಸಂತೋಷ್ಗೆ ಥಳಿಸಿ, ಬಳಿಕ ಮಸಳಿ ಬಳಿಯ ಸೇತುವೆ ಕೆಳಗೆ ಬಿಸಾಕಿ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.
ಓದಿ : ಹಣ ನೀಡದಿದ್ದಕ್ಕೆ ಪಾರ್ಶ್ವವಾಯು ಪೀಡಿತ ತಂದೆಯನ್ನ ಕೊಡಲಿಯಿಂದ ಹೊಡೆದು ಕೊಂದ ಮಗ!
ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ನೀಡಲು ಹೋದರೆ, ಇಂಡಿ ಗ್ರಾಮೀಣ ಠಾಣೆ ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಸಂತೋಷ್ ನದ್ಯಾಳ್ ಹೇಳಿದ್ದು, ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.