ETV Bharat / state

ನಾಳೆ ರಾಜ್ಯಾದ್ಯಂತ ಕರ್ನಾಟಕ ಬಂದ್, ವಿಜಯಪುರದಲ್ಲಿ ಪೊಲೀಸ್ ಭದ್ರತೆ

ಆಟೋ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಎಂದಿನಂತೆ ಕಾರ್ಯನಿರ್ವಹಿಸಲಿವೆ. ತಾಲೂಕಿನ ತಹಶೀಲ್ದಾರ್​​ಗಳು ಕೇಂದ್ರ ಸ್ಥಾನದಲ್ಲಿದ್ದು ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸೂಚನೆ..

Police security in Vijayapura due to Karnataka bandh
ನಾಳೆ ರಾಜ್ಯಾದ್ಯಂತ ಕರ್ನಾಟಕ ಬಂದ್ : ವಿಯಪುರದಲ್ಲಿ ಪೊಲೀಸ್ ಭದ್ರತೆ
author img

By

Published : Sep 27, 2020, 9:18 PM IST

Updated : Sep 27, 2020, 9:42 PM IST

ವಿಜಯಪುರ : ಎಪಿಎಂಸಿ ಕಾಯ್ದೆ ವಿರೋಧಿಸಿ ನಾಳೆ ವಿವಿಧ ರೈತ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆ ವಿಜಯಪುರ ಜಿಲ್ಲೆಯಲ್ಲಿ ಎಂದಿನಂತೆ ಬಸ್,ಅಟೋ ಸಂಚಾರ ಹಾಗೂ ಸರ್ಕಾರಿ ಕಚೇರಿಗಳು ಇರಲಿವೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ತಿಳಿಸಿದ್ದಾರೆ.

ನಾಳೆ ರಾಜ್ಯಾದ್ಯಂತ ಕರ್ನಾಟಕ ಬಂದ್, ವಿಜಯಪುರದಲ್ಲಿ ಪೊಲೀಸ್ ಭದ್ರತೆ

ಹೆಚ್ಚುವರಿ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ. ನಾಳೆ ನಡೆಯಬೇಕಾಗಿದ್ದ ಡಿಪ್ಲೋಮಾ ಪರೀಕ್ಷೆ ಮುಂದೂಡಲಾಗಿದೆ. ಎಲ್ಲಾ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಇದರ ಜತೆ ಆಟೋ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಎಂದಿನಂತೆ ಕಾರ್ಯನಿರ್ವಹಿಸಲಿವೆ. ತಾಲೂಕಿನ ತಹಶೀಲ್ದಾರ್​​ಗಳು ಕೇಂದ್ರ ಸ್ಥಾನದಲ್ಲಿದ್ದು ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ಸೂಚನೆ ನೀಡಿದ್ದಾರೆ.

ಪೊಲೀಸ್ ಭದ್ರತೆ : ಕರ್ನಾಟಕ ಬಂದ್ ಹಿನ್ನೆಲೆ ಜಿಲ್ಲಾದ್ಯಂತ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. 65 ಪೊಲೀಸ್ ಅಧಿಕಾರಿಗಳು, 1100 ಪೊಲೀಸರು, 6 ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಎಸ್ಪಿ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

Last Updated : Sep 27, 2020, 9:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.