ETV Bharat / state

ಲಾರಿಯಲ್ಲಿ ಅಕ್ರಮ ಮದ್ಯ ಸಾಗಾಟ, ಚಾಲಕ ಸೆರೆ; ₹47 ಲಕ್ಷ ಮೌಲ್ಯದ ಮಾಲು ವಶ

ಧೂಳಖೇಡ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ವಾಹನ ತಡೆದು ತಪಾಸಣೆ ನಡೆಸುತ್ತಿದ್ದಾಗ ಲಾರಿಯೊಂದರಲ್ಲಿ ಲಕ್ಷಾಂತರ ಮೌಲ್ಯದ ಅಕ್ರಮ ಮದ್ಯ ಪತ್ತೆಯಾಗಿದೆ.

ಅಕ್ರಮ ಮದ್ಯ ವಶ
ಅಕ್ರಮ ಮದ್ಯ ವಶ
author img

By

Published : Mar 27, 2023, 7:21 AM IST

Updated : Mar 27, 2023, 12:18 PM IST

ವಿಜಯಪುರ: ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿ ತಡೆದ ಅಬಕಾರಿ ಪೊಲೀಸರು ಚಾಲಕನನ್ನು ಬಂಧಿಸಿ ಮದ್ಯ ಜಪ್ತಿ ಮಾಡಿದ್ದಾರೆ. ಈ ಘಟನೆ ಚಡಚಣ ತಾಲೂಕಿನ ಧೂಳಖೇಡ ಚೆಕ್ ಪೋಸ್ಟ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ತುಮಕೂರು ನಿವಾಸಿ ಫೈರೋಜ್ ಸೈಯದ್ ಅಬ್ದುಲ್ ರಹಮಾನ್‌ ಬಂಧಿತ. ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸುತ್ತಿದ್ದಾಗ 47.38 ಲಕ್ಷ ರೂ ಮೌಲ್ಯದ 9,108 ಲೀಟರ್ ಬಿಯರ್ ಹಾಗೂ 10 ಲಕ್ಷ ಮೌಲ್ಯದ ಲಾರಿ ಸೇರಿ ₹57,38,851 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇಂಡಿ ವಲಯ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೀರೆ ವಶಕ್ಕೆ: ಅಕ್ರಮವಾಗಿ ಸೀರೆ, ಇತರೆ ಬಟ್ಟೆ ಸಂಗ್ರಹಿಸಿಟ್ಟಿದ್ದ ಕಾಂಪ್ಲೆಕ್ಸ್ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಮುದ್ದೇಬಿಹಾಳ ಪಟ್ಟಣದ ಹಳೇ ತಹಶೀಲ್ದಾರ ಕಚೇರಿಯ ಬಳಿ ನಡೆದಿದೆ. ಮೋಹನ ಹಂಚಾಟೆ ವಿರುದ್ಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಮದ್ಯ ಜಪ್ತಿ: ಇಂಡಿ ತಾಲ್ಲೂಕಿನ ಹಡಲಸಂಗ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಅಣ್ಣಾರಾಯ್ ಶ್ರೀಶೈಲ್ ಪೂಜಾರಿ ಬಂಧಿತ. ಈತನಿಂದ 14 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ.‌ ಇಂಡಿ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗದು ವಶಕ್ಕೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 54 ಲಕ್ಷ ರೂ. ಹಣವನ್ನು ಝಳಕಿ ಚೆಕ್​ಪೋಸ್ಟ್​ನಲ್ಲಿ ಭಾನುವಾರ ಮಧ್ಯರಾತ್ರಿ ವಶಕ್ಕೆ ಪಡೆಯಲಾಗಿದೆ. ಕಾರು ತಡೆದು ಪರಿಶೀಲನೆ ನಡೆಸಿದಾಗ ಒಟ್ಟು 54,49,000 ರೂ. ಸಾಗಣೆ ಕಂಡು ಬಂದಿದ್ದು, ಈ ಸಂಬಂಧ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಣ ಸಾಗಣೆ ಬಗ್ಗೆ ಝಳಕಿ ಚೆಕ್​ಪೋಸ್ಟ್ ಸಿಬ್ಬಂದಿಗೆ ಮಾಹಿತಿ ಲಭ್ಯವಾಗಿತ್ತು. ತಕ್ಷಣ ಅಲರ್ಟ್ ಆದ ಪೊಲೀಸರು ವಾಹನ ತಪಾಸಣೆ ನಡೆಸಿ ನಗದು ಹಣ ವಶಪಡಿಸಿಕೊಂಡಿದ್ದಾರೆ.

ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ವಿಚಾರಣೆ ನಡೆಸಿದಾಗ ಬೆಂಗಳೂರಿನಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ತೆರಳುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಹಣ ಯಾವ ಉದ್ದೇಶಕ್ಕೆ ತೆಗೆದುಕೊಂಡು ಹೋಗುತ್ತಿದ್ದರು ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಚಡಚಣ ಸಿಪಿಐ ಮಾಹಿತಿ ನೀಡಿದ್ದಾರೆ.

ಬಾವಿಯಲ್ಲಿ ಬಿದ್ದ ವ್ಯಕ್ತಿಯ ರಕ್ಷಣೆ: ಸಿಂದಗಿ ಪಟ್ಟಣದಲ್ಲಿ ಅಂದಾಜು 80 ಅಡಿ ಆಳದ ಬಾವಿಗೆ ಕಾಲು ಜಾರಿ ಬಿದ್ದಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ.‌ ಅಸ್ಲಂ ಮೌಲಾಸಾಹೇಬ್ ನದಾಫ್‌ ಎಂಬಾತನನ್ನು ರಕ್ಷಿಸಲಾಗಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

ಕಾರ್‌ನಲ್ಲಿ 9 ಲಕ್ಷ ರೂ ಪತ್ತೆ: ವಾಹನ ತಪಾಸಣೆ ಮಾಡುತ್ತಿದ್ದಾಗ ಸೂಕ್ತ ದಾಖಲೆ‌ ಇಲ್ಲದೇ ಕಾರಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂಪಾಯಿ ಹಣವನ್ನು ದೇವಣಗಾಂವ್ ಚೆಕ್​ಪೋಸ್ಟ್ ಬಳಿ ಪೊಲೀಸರು ಕಾರುಸಮೇತ ವಶಕ್ಕೆ ಪಡೆದಿದ್ದಾರೆ. ಕೇರಳದಿಂದ ಅಫ್ಜಲಪುರಕ್ಕೆ ಹಣ ತೆಗೆದುಕೊಂಡು ಹೋಗಲಾಗುತ್ತಿತ್ತು. ಆಲಮೇಲ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ವಿಜಯಪುರ : ದೇವಣಗಾಂವ್ ಚೆಕ್​ಪೋಸ್ಟ್ ಬಳಿ ದಾಖಲೆ ಇಲ್ಲದ 9 ಲಕ್ಷ ಹಣದ ಜೊತೆ ಸೀರೆ, ಬಟ್ಟೆ ಜಪ್ತಿ

Last Updated : Mar 27, 2023, 12:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.