ETV Bharat / state

ಕಲಬುರಗಿಯಲ್ಲಿ 227 ಜನರಿಗೆ ಕೊರೊನಾ, ವಿಜಯಪುರ ಜಿಲ್ಲೆಯಲ್ಲಿ 134 ಸೋಂಕಿತರು ಪತ್ತೆ

author img

By

Published : Aug 25, 2020, 11:41 PM IST

ಕಲಬುರಗಿ ಹಾಗೂ ವಿಜಯಪುರದಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗುತ್ತಿದ್ದಾರೆ. ಇಂದು ಕಲಬುರಗಿಯಲ್ಲಿ 227 ಹಾಗೂ ವಿಜಯಪುರ ಜಿಲ್ಲೆಯಲ್ಲಿ 134 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

positive cases in kalburgi and vijaypur
ಕಲಬುರಗಿ ಹಾಗೂ ವಿಜಯಪುರದಲ್ಲಿ ಕೊರೊನಾ ಸೋಂಕಿತರು ಹೆಚ್ಚಳ

ಕಲಬುರಗಿ/ವಿಜಯಪುರ: ಕಲಬುರಗಿ ಜಿಲ್ಲೆಯಲ್ಲಿ ಇಂದು ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ನಗರದ 50 ವರ್ಷದ ಪುರುಷ, ಕುಸನೂರು ರಸ್ತೆಯ 58 ವರ್ಷದ ಪುರುಷ, ಜೇವರ್ಗಿ ತಾಲೂಕಿನ ಇಟಗಿ ಗ್ರಾಮದ 57 ವರ್ಷದ ಪುರುಷ ಸಾವನ್ನಪ್ಪಿದವರು. ಅಧಿಕ ರಕ್ತದೊತ್ತಡ, ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲಿ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 195ಕ್ಕೆ ಏರಿಕೆಯಾಗಿದೆ.

ಇಂದು 227 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 10,545ಕ್ಕೆ ಏರಿಕೆಯಾಗಿದೆ. ಇಂದು 189 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 8,542ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1,808 ಸಕ್ರಿಯ ಪ್ರಕರಣಗಳಿವೆ.

134 ಜನರಿಗೆ ಕೊರೊನಾ:

ವಿಜಯಪುರ ಜಿಲ್ಲೆಯಲ್ಲಿ 134 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟೂ ಸೋಂಕಿತರ 5,941ಕ್ಕೆ ಏರಿಕೆಯಾಗಿದೆ. 488 ಜನರ ಕೊರೊನಾ ಪರೀಕ್ಷೆ ಮಾಡಲಾಗಿದೆ. ಕೊರೊನಾದಿಂದ 108 ಜನ ಗುಣಮುಖರಾಗಿದ್ದು, ಇದುವರೆಗೆ 5 ಸಾವಿರ ಸೋಂಕಿತರು ಗುಣಮುಖರಾಗಿದ್ದಾರೆ.

ಅಲ್ಲದೆ ನಾಲ್ವರು ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 85ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ. ಜಿಲ್ಲಾಸ್ಪತ್ರೆ, ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ 855 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 53,467 ಜನರ ಮೇಲೆ ನಿಗಾ ಇಡಲಾಗಿದೆ. 67, 521 ಜನರ ಸ್ಯಾಂಪಲ್ ಪಡೆಯಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.