ವಿಜಯಪುರ: ಪ್ರಶಾಂತ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ತೀರ್ಪು ಹಿಂಪಡೆಯುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಖ್ಯಾತ ನ್ಯಾಯವಾದಿ ಹಾಗೂ ಪ್ರಗತಿಪರ ಚಿಂತಕ ಪ್ರಶಾಂತ್ ಭೂಷಣ್ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣವನ್ನು ಉದ್ದೇಶ ಪೂರ್ವಕವಾಗಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಯನ್ನು ತರಾತುರಿಯಲ್ಲಿ ನಡೆಸಲಾಗಿದೆ. ಸತ್ಯಾಂಶ ಕುರಿತು ಸರಿಯಾಗಿ ತನಿಖೆ ನಡೆದಿಲ್ಲ ಎಂದು ಪ್ರಗತಿ ಪರ ಸಂಘಟನೆ ಕಾರ್ಯಕರ್ತರು ಆರೋಪಿಸಿದರು.
ಬಳಿಕ ಜಿಲ್ಲಾಧಿಕಾರಿ ಮೂಲಕ ಸಂಘಟನೆ ಕಾರ್ಯಕರ್ತರು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.