ವಿಜಯಪುರ: ಮಾಜಿ ಸಚಿವ, ಶಾಸಕ ಎಂ.ಸಿ. ಮನಗೂಳಿ ಅಂತ್ಯಕ್ರಿಯೆ ಹಿನ್ನೆಲೆ ಸಿಂದಗಿಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಸಿಂದಗಿ ತಾಲೂಕು ಶಿಕ್ಷಣ ಪ್ರಸಾರ ಮಂಡಳಿಯ ಮೈದಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಇನ್ನು ಮನಗೂಳಿಯವರ ಅಂತಿಮ ದರ್ಶನ ಪಡೆಯಲು ಮಾಜಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಗೋವಿಂದ ಕಾರಜೋಳ, ಈಶ್ವರ ಖಂಡ್ರೆ, ಎಚ್. ಡಿ. ರೇವಣ್ಣ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ.
ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸುವಂತೆ ಸರ್ಕಾರ ಸೂಚನೆ ನೀಡಿದೆ. ಮನಗೂಳಿ ಅವರ ಪಾರ್ಥಿವ ಶರೀರದ ಮೆರವಣಿಗೆ ಮನೆಯ ಬಳಿಯಿಂದ ಶಾಂತವೀರ ಕಾಲೇಜಿನವರೆಗೆ ನಡೆಯಲಿದೆ. ಅಂತಿಮ ದರ್ಶನಕ್ಕಾಗಿ ಶಾಂತವೀರ ಕಾಲೇಜಿನಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಅಂತಿಮ ದರ್ಶನದ ಬಳಿಕ 12 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಸುವ ಸಾಧ್ಯತೆ ಇದೆ.