ETV Bharat / state

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ ಸಾರ್ವಜನಿಕರಿಗೆ ದೊರೆಯಬೇಕು: ಜಿಲ್ಲಾಧಿಕಾರಿ - ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್ ಹೇಳಿಕೆ

ಸರ್ಕಾರದ ಹೊಸ ಯೋಜನೆ ಸಾರ್ವಜನಿಕರಿಗೆ ಹಾಗೂ ಮೀನುಗಾರರಿಗೆ ಅವರ ಕುಟುಂಬದವರಿಗೆ ಮುಟ್ಟುವಂತಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಸೂಚಿಸಿದ್ದಾರೆ.

DC meeting
ಪ್ರಗತಿ ಪರಿಶೀಲನಾ ಸಭೆ
author img

By

Published : Jul 8, 2020, 9:55 AM IST

ವಿಜಯಪುರ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಸಕಾಲದಲ್ಲಿ ಯಾವುದೇ ಅಡೆತಡೆಯಿಲ್ಲದೆ ಸಾರ್ವಜನಿಕರಿಗೆ ದೊರೆಯುವಂತಾಗಬೇಕು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಸಭೆ
ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ನಡೆದ ಪ್ರಧಾನಮಂತ್ರಿ ಯೋಜನೆ ಜಿಲ್ಲಾ ಕ್ರಿಯಾ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎರಡು ಜಲಾಶಯ, 189 ಕೆರೆಗಳು ಮತ್ತು ಕೃಷಿ ಹೊಂಡಗಳಿದ್ದು ರೈತರಿಗೆ ಮೀನುಗಾರಿಕೆಯ ಅವಕಾಶ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸಮಿತಿ ರಚನೆ ಹಾಗೂ ವ್ಯವಸ್ಥಿತ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಮೀನುಗಾರಿಕೆ ಮಾಡಲು ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ವಿಪುಲ ಅವಕಾಶಗಳಿದ್ದು, ವಾಹನಗಳ ಖರೀದಿಗೆ ಶೇ.60ರಷ್ಟು ಹಾಗೂ ಸಾಮಾನ್ಯ ವರ್ಗದವರಿಗೆ 40ರಷ್ಟು ರಿಯಾಯಿತಿಯಿದೆ. ಇದರ ಲಾಭ ಜಿಲ್ಲೆಯ ಮೀನುಗಾರರಿಗೆ ಸಿಗುವಂತಾಗಬೇಕು. ಮೀನುಗಾರರ ಕುಂದುಕೊರತೆಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ಸಮರ್ಪಕವಾಗಿ ಸಿದ್ಧತೆ ಆಗಬೇಕು ಎಂದರು.
ಮೀನುಗಾರಿಕೆ ಮಾಡಲಿಚ್ಚಿಸುವವರಿಗೆ ವಾಹನ ಖರೀದಿ, ಮೀನು ಸಂಗ್ರಹಣೆ ಸಂಘಗಳ ನಿರ್ಮಾಣ, ಮೀನು ಮಾರಾಟಕ್ಕೆ, ಮೀನು ತಾಜಾತನ ಕಾಯ್ದಿಟ್ಟುಕೊಳ್ಳಲು ಕೋರಿ ಸೇರಿದಂತೆ ವಿಧಗಳು ಅವಕಾಶಗಳ ಕುರಿತು ಸಾರ್ವಜನಿಕರಿಗೆ ಮನವರಿಕೆಯಾಗುವಂತೆ ನೋಡಿಕೊಳ್ಳಬೇಕು. ಸರ್ಕಾರದ ಹೊಸ ಯೋಜನೆ ಸಾರ್ವಜನಿಕರಿಗೆ ಹಾಗೂ ಮೀನುಗಾರರಿಗೆ ಅವರ ಕುಟುಂಬದವರಿಗೆ ಮುಟ್ಟುವಂತಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮ ವಹಿಸಬೇಕೆಂದು ಸಭೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಹಾಗೂ ಪ್ರಗತಿಪರ ಮೀನುಗಾರರು ಸಭೆಯಲ್ಲಿ ಭಾಗಿಯಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.